ಹುಬ್ಬಳ್ಳಿ: ಕರ್ನಾಟಕ ರಾಜ್ಯ ಪೊಲೀಸ್ ಹುತಾತ್ಮದಿನದ ಅಂಗವಾಗಿ ವಾಣಿಜ್ಯನಗರಿ ಹುಬ್ಬಳ್ಳಿಯ ಸಿಎಆರ್ ಮೈದಾನದಲ್ಲಿಂದು ಸಿಎಂ ಬಸವರಾಜ ಬೊಮ್ಮಾಯಿ ಹುತಾತ್ಮ ದಿನಾಚರಣೆಯಲ್ಲಿ ಭಾಗಿಯಾಗಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿದರು.
ಹುಬ್ಬಳ್ಳಿಯ ಹಳೆ ಸಿಎಆರ್ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಸಿಎಂ ಪುಷ್ಪ ನಮನ ಸಲ್ಲಿಸಿದರು. ಸಿಎಂ ಗೆ ಪೊಲೀಸ್ ಪಡೆಗಳಿಂದ ಗೌರವ ವಂದನೆ ಸಲ್ಲಿಸಲಾಯಿತು. ಇನ್ನೂ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯಿಂದಲೂ ಹುತಾತ್ಮ ಪೊಲೀಸರಿಗೆ ಪುಷ್ಪ ನಮನ ಸಲ್ಲಿಸಲಾಯಿತು.
Kshetra Samachara
21/10/2021 10:12 am