ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ಧಾರವಾಡ: ಚುನಾವಣೆ ಹುರುಪಿನಲ್ಲಿದ್ದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಧಾರವಾಡ ಹೈಕೋರ್ಟ್ ಶಾಕ್ ನೀಡಿದೆ.

ಹೌದು! ನ.28ಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಕಾರ್ಯಕಾರಿ ಮಂಡಳಿಗೆ ಚುನಾವಣೆ ಜರುಗಬೇಕಾಗಿದೆ. ಆದರೆ, 2003 ರಿಂದ ಇಲ್ಲಿಯವರೆಗೂ ಕರ್ನಾಟಕ ವಿದ್ಯಾವರ್ಧಕ ಸಂಘದ ಯಾವುದೇ ಕಾರ್ಯಚಟುವಟಿಕೆಗಳು ನೋಂದಣಿ ನವೀಕರಣ ಆಗದೇ ಇರುವುದರಿಂದ ಸದ್ಯ ನಡೆಸುತ್ತಿರುವ ಚುನಾವಣೆ ಕಾನೂನು ಬಾಹಿರವಾಗಿದೆ. ಆದ್ದರಿಂದ ಚುನಾವಣೆಗೆ ತಡೆಯಾಜ್ಞೆ ನೀಡಬೇಕು ಎಂದು ವಕೀಲರೂ ಆಗಿರುವ ಸಾಮಾಜಿಕ ಹೋರಾಟಗಾರ ಮಹಾದೇವ ದೊಡಮನಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌, 2003 ರಿಂದ ಇಲ್ಲಿಯವರೆಗೂ ಸಂಘದ ಕಾರ್ಯಚಟುವಟಿಕೆಗಳ ನವೀಕೃತ ಮಾಹಿತಿ ಮತ್ತು ಅಗತ್ಯ ದಾಖಲೆಗಳನ್ನು ಮೂರು ದಿನಗಳ ಒಳಗಾಗಿ ಸಲ್ಲಿಸುವಂತೆ ಸೂಚನೆ ನೀಡಿ ನೋಟಿಸ್ ಜಾರಿ ಮಾಡಿದೆ.

ಸದ್ಯ ಮೂರು ದಿನಗಳ ಒಳಗಾಗಿ ಕರ್ನಾಟಕ ವಿದ್ಯಾವರ್ಧಕ ಸಂಘವು ಬೈಲಾ ಹಾಗೂ ಸಂಘದ ಕಾರ್ಯಚಟುವಟಿಕೆಗಳು ನವೀಕರಣಗೊಂಡ ಬಗ್ಗೆ ದಾಖಲೆಗಳನ್ನು ಪೂರೈಕೆ ಮಾಡದೇ ಹೋದಲ್ಲಿ ಚುನಾವಣೆ ರದ್ದುಗೊಳ್ಳುವ ಸಾಧ್ಯತೆ ಕೂಡ ಇದೆ.

Edited By : Nagesh Gaonkar
Kshetra Samachara

Kshetra Samachara

11/11/2021 04:47 pm

Cinque Terre

34.31 K

Cinque Terre

0

ಸಂಬಂಧಿತ ಸುದ್ದಿ