ಧಾರವಾಡ: ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆಗೆ ವಕೀಲರ ಸಂಘದ ಸದಸ್ಯರನ್ನು ಚುನಾವಣಾಧಿಕಾರಿಯಾಗಿ ಅನೇಕ ವರ್ಷಗಳಿಂದ ನೇಮಕ ಮಾಡುತ್ತ ಬರಲಾಗಿದೆ. ವಕೀಲರು ಪಾರದರ್ಶಕವಾಗಿಯೇ ಚುನಾವಣೆ ನಡೆಸುತ್ತ ಬಂದಿದ್ದಾರೆ. ಆದರೆ, ಕವಿವ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಸಂಜೀವ ಎನ್ನುವವರು ವಕೀಲರನ್ನು ಚುನಾವಣಾಧಿಕಾರಿಯಾಗಿ ನೇಮಕ ಮಾಡಬಾರದು ಎಂಬ ಹೇಳಿಕೆ ನೀಡಿದ್ದಾರೆ.
ಈ ಸಂಬಂಧ ವಕೀಲರ ಸಂಘದ ಅಧ್ಯಕ್ಷ ಬಿ.ಎಸ್.ಗೋಡಸೆ ಪ್ರತಿಕ್ರಿಯೆ ನೀಡಿದ್ದಾರೆ.
ವಕೀಲರು ಅನೇಕ ಸಂಘ, ಸಂಸ್ಥೆಗಳ ಚುನಾವಣೆಯಲ್ಲಿ ಪಾರದರ್ಶಕವಾಗಿಯೇ ಚುನಾವಣಾಧಿಕಾರಿಗಳಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರೇ ಕವಿವ ಸಂಘದ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿ ಮುಂದುವರೆಯಲಿದ್ದಾರೆ ಎಂದಿದ್ದಾರೆ.
Kshetra Samachara
26/11/2021 09:10 am