ಧಾರವಾಡ: ಧಾರವಾಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಭಜಂತ್ರಿ ನಿನ್ನೆಯಷ್ಟೇ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಈ ಹಿಂದೆ ಇದ್ದ ಶಿವಾನಂದ ಕರಾಳೆ ಅವರು ಧಾರವಾಡ ಕೃಷಿ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ವರ್ಗಾವಣೆಯಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ರಾಜ್ಯ ಸರ್ಕಾರ ಇದೀಗ ಶಿವಾನಂದ ಭಜಂತ್ರಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎಡಿಸಿ ಭಜಂತ್ರಿ ಅವರು, ಈ ಹಿಂದೆ ತಹಶೀಲ್ದಾರ ಆಗಿ ನಾನು ಧಾರವಾಡದಲ್ಲಿ ಕೆಲಸ ಮಾಡಿದ್ದೇನೆ. ಆ ಅನುಭವ ಇದೀಗ ಎಡಿಸಿ ಆಗಿ ಕೆಲಸ ಮಾಡಲು ಅನುಕೂಲವಾಗುತ್ತದೆ. ಧಾರವಾಡ ಜಿಲ್ಲೆಯ ಜನತೆ ಕೋವಿಡ್ ನಿಯಂತ್ರಣಕ್ಕೆ ನಮ್ಮೊಂದಿಗೆ ಕೈ ಜೋಡಿಸಬೇಕು. ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದರು.
Kshetra Samachara
11/01/2022 04:02 pm