ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಅವರ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿರುವ ಕ್ರಮವನ್ನು ಪ್ರಶ್ನಿಸಿ ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಯೋಗೀಶಗೌಡ ಕೊಲೆ ಪ್ರಕರಣದ ತನಿಖೆ ನಡೆಸುವಂತೆ ಸರ್ಕಾರ ಸಿಬಿಐಗೆ ವಹಿಸಿದ್ದನ್ನು ಪ್ರಶ್ನಿಸಿ ಈ ಮೊದಲು ಹೈಕೋರ್ಟ್‌ನಲ್ಲೂ ವಿನಯ್ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ನಂತರ ವಿನಯ್ ಅವರು ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಸುಪ್ರೀ ಕೋರ್ಟ್ ಕೂಡ ಹೈಕೋರ್ಟ್ ಆದೇಶವನ್ನೇ ಎತ್ತಿ ಹಿಡಿದು ವಿನಯ್ ಅವರ ಅರ್ಜಿಯನ್ನೇ ವಜಾಗೊಳಿಸಿದೆ. ಸದ್ಯ ವಿನಯ್ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರೂ ಕೊಲೆ ತನಿಖೆ ಮುಂದುವರೆಯಲಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
07/02/2022 03:49 pm