ಧಾರವಾಡ: ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಜಲ ಜೀವನ ಮಿಷನ್ ಯೋಜನೆಗೆ ಸಂಬಂಧಿಸಿದ ಪೈಪ್‌ಗಳು ಬೆಂಕಿಗೆ ಆಹುತಿಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಓ ಸುರೇಶ ಇಟ್ನಾಳ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೆಬ್ಬಳ್ಳಿಯ ತ್ಯಾಜ್ಯ ವಿಲೇವಾರಿ ಘಟಕದ ಬಳಿ ಇಡಲಾಗಿದ್ದ ಸುಮಾರು 1 ಕೋಟಿ 38 ಲಕ್ಷ ರೂಪಾಯಿ ಮೌಲ್ಯದ ಪೈಪ್‌ಗಳಿಗೆ ನಿನ್ನೆ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದರು. ಇದರಿಂದ ಪೈಪ್‌ಗಳು ಸುಟ್ಟು ಕರಕಲಾಗಿದ್ದು, ತ್ಯಾಜ್ಯ ವಿಲೇವಾರಿ ಘಟಕಕ್ಕೂ ಬೆಂಕಿ ಹೊತ್ತಿಕೊಂಡಿತ್ತು.
ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಎಸ್‌ಪಿ ಹಾಗೂ ಜಿಪಂ ಸಿಇಓ ಗ್ರಾಮಸ್ಥರಿಂದ ಈ ಬಗ್ಗೆ ಮಾಹಿತಿ ಪಡೆದರು. ಸದ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸಿ, ಆರೋಪಿಗಳನ್ನು ಪತ್ತೆ ಮಾಡಲಾಗುವುದು ಎಂದು ಎಸ್‌ಪಿ ಈ ಸಂದರ್ಭದಲ್ಲಿ ತಿಳಿಸಿದರು.
Kshetra Samachara
26/02/2022 06:55 pm