ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು

ಹುಬ್ಬಳ್ಳಿ: ನಾಳೆ ಪ್ರತಿಭಟನೆ ನಡೆಸಲು ಪೂರ್ವಭಾವಿ ಸಭೆ ನಡೆಸಿದ ಬಿಜೆಪಿಗರಿಗೆ ಕಾಂಗ್ರೆಸ್ ಗುಲಾಬಿ ಹೂವು ನೀಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆಯಿತು.

ಅದರಂತೆ ಇಂದು ಪ್ರತಿಭಟನೆ ಪೂರ್ವಭಾಗಿಯಾಗಿ ಬಿಜೆಪಿ ಕಾರ್ಯಕರ್ತರು ನಗರದ ದೇಶಪಾಂಡೆ ನಗರದ ಶ್ರೀಕೃಷ್ಣ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿತು. ಈ ವೇಳೆ ಕಾಂಗ್ರೆಸ್ ಆಡಳಿತ ಪಕ್ಷವೇ ವಿರೋಧ ಪಕ್ಷದ ವಿರುದ್ಧ ಪ್ರತಿಭಟನೆ ಮಾಡಿದ್ದು ಇತಿಹಾಸದಲ್ಲಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಪ್ರತಿಭಟನೆಯನ್ನು ಮೊಟಕುಗೊಳಿಸಬೇಕೆಂದು ಮನವರಿಕೆ ಮಾಡಲು ಕಾಂಗ್ರೆಸ್ ಮುಖಂಡರು ಬಿಜೆಪಿಗರಿಗೆ ಗುಲಾಬಿ ಹೂವು ನೀಡಲು ಮುಂದಾಯಿತು. ಈ ವೇಳೆ ಪೋಲಿಸರು ಕಾಂಗ್ರೆಸ್ ಕಾರ್ಯಕರ್ತರನ್ನು ತಡೆದ ಘಟನೆ ನಡೆಯಿತು. ನಂತರ ಕಾರ್ಯಕರ್ತರು ಹೂವು ಕೊಟ್ಟೆ ತೀರುತ್ತೇವೆ ಎಂದು ಪಟ್ಟು ಹಿಡಿದರು. ನಂತರ ಅನಿವಾರ್ಯದಿಂದ ಪೊಲೀಸರು ಶಾಂತಿಯುತವಾಗಿ ಗುಲಾಬಿ ಹೂವು ನೀಡಲು ಅವಕಾಶ ಮಾಡಿಕೊಟ್ಟರು.

ಆದಾಗ್ಯೂ ಕೆಲವು ಕಾರ್ಯಕರ್ತರು ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿದರು. ಪರಿಣಾಮ ಕೆಲಕಾಲ ಹೈಡ್ರಾಮಾ ಕೂಡಾ ನಡೆಯಿತು. ಆಗ ಪೋಲಿಸರು ಕಾರ್ಯಕರ್ತರನ್ನು ಬಂಧಿಸಿದರು.

Edited By : Nagesh Gaonkar
Kshetra Samachara

Kshetra Samachara

26/02/2022 07:39 pm

Cinque Terre

29.26 K

Cinque Terre

8

ಸಂಬಂಧಿತ ಸುದ್ದಿ