ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ವಿಪ್ ಉಲ್ಲಂಘಿಸಿದ ಮೂವರು ಸದಸ್ಯರ ಸದಸ್ಯತ್ವ ರದ್ದು

ಕುಂದಗೋಳ : ಕಳೆದ ಎರಡನೇ ಅವಧಿಯ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆ ವೇಳೆ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪ ಎದುರಿಸುತ್ತಿದ್ದ ಮೂವರು ಸದಸ್ಯರ ಸದಸ್ಯತ್ವ ರದ್ದಾಗಿದೆ.

ಹೌದು ! ನವೆಂಬರ್ ತಿಂಗಳಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯ ಸಂದರ್ಭ ಬಿಜೆಪಿ ಸದಸ್ಯರಾದ ಸುನೀತಾ ಪಾಟೀಲ, ಮಲ್ಲಿಕಾರ್ಜುನ ಕಿರೇಸೂರು, ನೀಲಮ್ಮ ಕುಂದಗೋಳ ಅವರು ಪಕ್ಷ ನೀಡಿದ ವಿಪ್ ಉಲ್ಲಂಘಿಸಿದ್ದಾರೆ ಎಂದು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು.

ಆ ಬಳಿಕ ಮೂವರು ಸದಸ್ಯರ ಸದಸ್ಯತ್ವ ರದ್ದುಗೊಳಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರು.

ಈ ವಿಷಯದ ಕುರಿತಂತೆ ವಾದ ಪ್ರತಿವಾದ ಆಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಟೇಲ್ ಮೂವರು ಸದಸ್ಯರ ಸದಸ್ಯತ್ವ ರದ್ದು ಮಾಡಿ ಸೋಮವಾರ ಆದೇಶ ಹೊರಡಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

06/04/2022 01:01 pm

Cinque Terre

39.25 K

Cinque Terre

1

ಸಂಬಂಧಿತ ಸುದ್ದಿ