ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆ ಎದುರಿನ ಗಲಾಟೆಯಲ್ಲಿ ಈಗಾಗಲೇ 40 ಜನರನ್ನ ಬಂಧಿಸಲಾಗಿದೆ. ಕಾನೂನು ಪ್ರಕಾರ ತಪ್ಪು ಮಾಡಿದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಹೇಳಿದರು.
ನಿನ್ನೆ ನಡೆದ ಗಲಾಟೆ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಡಿಸಿ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ತಪ್ಪಿತಸ್ಥರು ಯಾರು..? ತಪ್ಪಿತಸ್ಥ ಅಲ್ಲದವರ ಯಾರು ಎಂಬುದರ ಬಗ್ಗೆ ಮತ್ತೊಮ್ಮೆ ಪರಿಶೀಲನೆ ಮಾಡಲಾಗುತ್ತದೆ. ಜೊತೆಗೆ ಇದು ಪುರ್ವ ನಿಯೋಜಿತ ಕೃತ್ಯವಾ ಎಂಬುದರ ಬಗ್ಗೆ ತನಿಖೆಯ ನಂತರ ಗೊತ್ತಾಗಲಿದೆ ಎಂದಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
17/04/2022 05:28 pm