ಹುಬ್ಬಳ್ಳಿ : ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಕಚೇರಿಗೆ ಭೇಟಿ ನೀಡಿ ಪೊಲೀಸ್ ಆಯುಕ್ತರ ಜೊತೆಗೆ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಏಕಾಏಕಿ ಹುಬ್ಬಳ್ಳಿಗೆ ಭೇಟಿ ನೀಡಿ ಹುಬ್ಬಳ್ಳಿಯ ಗಲಭೆಯ ಕುರಿತು ಪೊಲೀಸ್ ಆಯುಕ್ತರ ಬಳಿ ಸಮಾಲೋಚನೆ ನಡೆಸಿದ್ದಾರೆ. ನವನಗರದಲ್ಲಿರುವ ಪೊಲೀಸ ಆಯುಕ್ತರ ಕಚೇರಿಗೆ ಆಗಮಿಸಿದ ಡಿ.ಕೆ.ಶಿವಕುಮಾರ ಮಾಹಿತಿ ಕಲೆ ಹಾಕಿಕೊಂಡಿದ್ದಾರೆ.
ಇದೇ ವೇಳೆ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ, ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ, ಎ.ಐ.ಸಿ.ಸಿ ಸದಸ್ಯ ಪಿ.ಎಚ್.ನೀರಲಕೇರಿ ಸಾಥ್ ನೀಡಿದ್ದು, ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.
Kshetra Samachara
19/04/2022 08:26 pm