ಹುಬ್ಬಳ್ಳಿ : ಹೂಬಳ್ಳಿಯಂತಿದ್ದ ಹುಬ್ಬಳ್ಳಿಯಲ್ಲಿ ಶಾಂತಿ ಸೌಹಾರ್ದತೆ ನೆಲೆ ನಿಂತಿತ್ತು. ಆದರೆ ಇದೊಂದು ಘಟನೆ ನಿಜಕ್ಕೂ ಮನುಕುಲಕ್ಕೆ ಮಾರಕವಾಗಿದೆ. ಈ ಘಟನೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಹಾನಗಲ್ ವಿಧಾನಸಭಾ ಮತಕ್ಷೇತ್ರದ ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಶನಿವಾರ ರಾತ್ರಿ ನಡೆದ ಗಲಾಟೆಯ ಕುರಿತು ಪಬ್ಲಿಕ್ ನೆಕ್ಸ್ಟ್ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡ ಅವರು, ಶಾಂತಿ ಸೌಹಾರ್ದತೆಯಿಂದ ವಾಣಿಜ್ಯ ಚಟುವಟಿಕೆಗಳ ಮೂಲಕ ಅಭಿವೃದ್ಧಿಯತ್ತ ಮುನ್ನಡೆಯುತ್ತಿರುವ ಹುಬ್ಬಳ್ಳಿಯಲ್ಲಿ ಇಂತಹ ಘಟನೆಗಳಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ. ಆದ್ದರಿಂದ ಇಂತಹ ದುಷ್ಕೃತ್ಯಗಳಿಗೆ ಯಾರು ಮುಂದಾಗಬಾರದು ಎಂದು ಎಚ್ಚರಿಕೆ ನೀಡಿದರು.
ಯಾವುದೇ ಸಂದರ್ಭದಲ್ಲಿ ಕೂಡ ಗಲಾಟೆಯಲ್ಲಿ ಅಮಾಯಕರು ಬಲಿಪಶುಗಳಾಗಬಾರದು. ಈ ಬಗ್ಗೆ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.
Kshetra Samachara
19/04/2022 11:00 pm