ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯಲ್ಲಿ ನಡೆದ ಘಟನೆ ನಿಜಕ್ಕೂ ಮನುಕುಲಕ್ಕೆ ಮಾರಕ. ಪೊಲೀಸರ ಮೇಲೆ ಹಾಗೂ ಸಾರ್ವಜನಿಕರ ಆಸ್ತಿಗಳ ಮೇಲೆ ಕಲ್ಲು ತೂರಾಟ ಮಾಡಿರುವುದು ಭಾರತದ ಸಂವಿಧಾನಕ್ಕೆ ಕಲ್ಲು ಹೊಡೆದಂತೆ. ಈ ಬಗ್ಗೆ ಎಲ್ಲ ಮುಸ್ಲಿಂ ಸಮುದಾಯದ ಜನರೊಂದಿಗೆ ಮಾತನಾಡಿ ತಿಳುವಳಿಕೆ ಹೇಳಿದ್ದೇನೆ ಎಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ವಜೀಮ್ ಹೇಳಿದರು.
ಶನಿವಾರ ರಾತ್ರಿ ಘಟನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ನಮ್ಮನ್ನು ರಕ್ಷಣೆ ಮಾಡುವ ಆರಕ್ಷಕರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿರುವುದು ನಿಜಕ್ಕೂ ವಿಷಾದಕರ ಎಂದರು.
ನಾವೆಲ್ಲರೂ ಭಾರತೀಯರು ಎಂಬುವಂತ ಭಾವನೆಯನ್ನು ಮನದಲ್ಲಿ ಇಟ್ಟುಕೊಂಡು ಬದುಕಬೇಕು. ಶಾಂತಿ- ಸೌಹಾರ್ದತೆಗೆ ಸಾಕ್ಷಿಯಾಗಿರುವ ನಮ್ಮ ನಾಡಿನಲ್ಲಿ ಇಂತಹ ಘಟನೆ ಮರುಕಳಿಸಬಾರದು. ಜನರೆಲ್ಲರೂ ಸ್ನೇಹ- ಸಾಮರಸ್ಯದಿಂದ ಬದುಕಬೇಕು ಎಂದು ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/04/2022 03:51 pm