ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡರ ವಿರುದ್ಧ ಇಡಿ ತನಿಖೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ನವನಗರದ ಐಟಿ ಕಚೇರಿಯ ಎದುರು ಬಿಗಿ ಪೋಲಿಸ್ ಬಂದೋಬಸ್ತ್ ನಿಯೋಜನೆ ಮಾಡಲಾಯಿತು.
ಹೌದು.ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಪ್ರತಿಭಟನೆಗೆ ತೀರ್ಮಾನ ಮಾಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಯಿತು.
ಡಿಸಿಪಿ ಸಾಹಿಲ್ ಬಾಗ್ಲಾ ಹಾಗೂ ಎಸಿಪಿ ವಿನೋದ ಮುಕ್ತೆದಾರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮಗಳನ್ನು ಜರುಗಿಸಲಾಯಿತು.
Kshetra Samachara
17/06/2022 11:32 am