ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಾಲಿಕೆ ಸದಸ್ಯ ಚೇತನ್ ಹಿರೇಕೆರೂರ ವಿಚಾರಣೆ: ಠಾಣೆಗೆ ಮುತ್ತಿಗೆ ಹಾಕಿದ ವಾರ್ಡ್ ನಂ.52 ರ ಜನ

ಹುಬ್ಬಳ್ಳಿ: ಮಹಾನಗರ ಪಾಲಿಕೆ ಸದಸ್ಯ ಚೇತನ್ ಹಿರೇಕೆರೂರ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಅವರಿಗೆ ಕಿರುಕುಳ ನೀಡುತ್ತಿದ್ದಾರೆಂದು ವಾರ್ಡ್ ನಂಬರ್ 52 ರ ಜನರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಚೇತನ್ ಅವರನ್ನು ಬಂಧನ ಮಾಡಿದ್ರೆ ನಾವೆಲ್ಲರೂ ಧರಣಿ ಮಾಡುತ್ತೇವೆಂದು ಸ್ಥಳೀಯ ನಿವಾಸಿಗಳು ಪೊಲೀಸ್ ಠಾಣೆಯ ಮುಂದೆ ಜಮಾವಣೆಗೊಂಡಿದ್ದಾರೆ.

ಗೋಕುಲ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಜನರು, ಚೇತನ್ ಹಿರೇಕೆರೂರ ಅವರು ಪಾಲಿಕೆ ಸದಸ್ಯರಾದ ಮೇಲೆ ಹಲವಾರು ಅಭಿವೃದ್ಧಿ ಹಾಗೂ ಜನ ಸೇವೆ ಮಾಡುತಿದ್ದಾರೆ. ಆದ್ದರಿಂದ ಅವರ ವಿರುದ್ಧ ಪ್ರತಿಯೊಂದು ವಿಷಯಕ್ಕೂ ಸುಳ್ಳು ಪ್ರಕರಣ ದಾಖಲಿಸಿ ಅವರ ಹೆಸರು ಕೆಡಿಸುವ ಕೆಲಸ ಮಾಡುತ್ತಿದ್ದಾರೆಂದು ಆರೋಪಿಸುತ್ತಿದ್ದಾರೆ.

ಸದ್ಯ ಅವರ ಸಹೋದರಿಯನ್ನೇ ಅವರೇ ಯಾಕೆ ಕಿಡ್ನಾಪ್ ಮಾಡುತ್ತಾರೆ. ಈ ಹಿಂದೆ ಸಹ ಅವರ ಮೇಲೆ ಸುಳ್ಳು ಕೇಸ್ ದಾಖಲು ಮಾಡಿದ್ದರು‌. ಈಗ ಮತ್ತೆ ಅದೇ ಹಾದಿ ತುಳಿಯುತ್ತಿದ್ದಾರೆ. ಆದ್ದರಿಂದ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿ ಯಾರು ತಪ್ಪು ಮಾಡಿದ್ದಾರೆ ಅವರ ಮೇಲೆ ಸೂಕ್ತ ಕ್ರಮಗೈಗೊಳ್ಳಬೇಕು. ಇಲ್ಲವಾದರೆ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಜನರು ಎಚ್ಚರಿಕೆ ನೀಡಿದ್ದಾರೆ.

Edited By : Manjunath H D
Kshetra Samachara

Kshetra Samachara

25/06/2022 05:56 pm

Cinque Terre

28.33 K

Cinque Terre

0

ಸಂಬಂಧಿತ ಸುದ್ದಿ