ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವಸ್ತು ಸ್ಥಿತಿ ನೋಡಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಮಾಡಲು ತೀರ್ಮಾನ ತೆಗೆದುಕೊಳ್ಳುತ್ತೇವೆ: ಆಯುಕ್ತ ಡಾ‌. ಗೋಪಾಲಕೃಷ್ಣ

ಹುಬ್ಬಳ್ಳಿ: ಈದ್ಗಾ ‌ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳದ ವಸ್ತು ಸ್ಥಿತಿ ಬಗ್ಗೆ ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಲಾಗುವುದು. ಅಲ್ಲಿಯವರೆಗೆ ಸಂಘಟನೆಗಳು ಮೊದಲಿನಂತೆ ಎಲ್ಲ ಇಲಾಖೆಯ ಪೂರ್ವಾನುಮತಿ ಪಡೆಯಬೇಕು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಮಿಷನರ್ ಡಾ.ಗೋಪಾಲಕೃಷ್ಣ ಹೇಳಿದರು.

ನಗರದಲ್ಲಿಂದು ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಸಿ ಮಾತನಾಡಿದ ಅವರು, ಆದಷ್ಟು ಶೀಘ್ರವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಎಲ್ಲಾ ಇಲಾಖೆ ಒಳಗೊಂಡು ಏಕಗವಾಕ್ಷಿಯನ್ನು ಆರಂಭಿಸುತ್ತೆವೆ. ಇದರಿಂದಲೇ ಎಲ್ಲಾ ಸಮಿತಿಗಳು ಅನುಮತಿ ಪಡೆಯಬೇಕು ಎಂದರು.

ನ್ಯಾಯಾಲಯದಿಂದ ಸ್ಪಷ್ಟ ನಿರ್ದೇಶನವಿದ್ದರೂ ಆ ಜಾಗ ವಿವಾದಿತ ಸ್ಥಳವಾಗಿದೆ. ಹೀಗಾಗಿ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಅಗತ್ಯವಿದೆ. ಕಾನೂನು ಸುವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಬೇಕಾಗಿದೆ. ಆ ಬಳಿಕ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದರು.

Edited By : Nagesh Gaonkar
Kshetra Samachara

Kshetra Samachara

22/08/2022 05:13 pm

Cinque Terre

38.76 K

Cinque Terre

1

ಸಂಬಂಧಿತ ಸುದ್ದಿ