ಹುಬ್ಬಳ್ಳಿ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ, ನಿಗಮವು 2.12 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಕಸಬಾ ಪೇಟ ಪೊಲೀಸ್ ಠಾಣೆ, 1.94 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ದಕ್ಷಿಣ ಸಂಚಾರ ಪೊಲೀಸ್ ಠಾಣೆಗಳ ನೂತನ ಕಟ್ಟಡಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಸೇರಿದಂತೆ ಉದ್ಘಾಟಿಸಿದರು.
ಈ ಪೊಲೀಸ್ ಕಟ್ಟಡಗಳಲ್ಲಿ ಕಂಪ್ಯೂಟರ್, ಆಯುಧ, ವರದಿ, ವಿಚಾರಣಾ ಕೊಠಡಿಗಳು, ಪುರುಷ ಮತ್ತು ಮಹಿಳಾ ಲಾಕ್ ಅಪ್, ಪ್ಯಾಂಟ್ರಿ, ದಾಖಲೆಗಳ ಕೊಠಡಿ ,ಸಭಾಂಗಣ ,ಶೌಚಾಲಯ ಮತ್ತಿತರ ಸೌಕರ್ಯಗಳನ್ನು ಹೊಂದಿವೆ.
ಇನ್ನು 7.49 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವ ಗೋಕುಲ ರಸ್ತೆ,ವಿದ್ಯಾನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗಳ ಶಂಕುಸ್ಥಾಪನೆ ನೆರವೇರಿಸಲಾಯಿತು.
Kshetra Samachara
05/09/2022 08:22 am