ಹುಬ್ಬಳ್ಳಿ: ರಾಜ್ಯದ ವಿವಿಧೆಡೆ SDPI ಕಾರ್ಯಕರ್ತರ ಮನೆ ಮೇಲೆ ನಡೆದ ದಾಳಿ ನಡೆಸಿದ್ದನ್ನು ಖಂಡಿಸಿ ಹುಬ್ಬಳ್ಳಿಯ ಕೌಲ್ ಪೇಟ್ ಬಳಿಯಲ್ಲಿ SDPI ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಪೊಲೀಸರನ್ನೇ ತಳ್ಳಾಡಿದ ಘಟನೆಯೂ ನಡೆದಿದೆ.
ಪೊಲೀಸರ ಮೇಲೆ ಪ್ರತಿಭಟನಾನಿರತರು ಹಲ್ಲೆಗೆ ಕೂಡ ಯತ್ನಿಸಿದರು. ಇದರಿಂದಾಗಿ ಎಸ್‌ಡಿಪಿಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಗಲಾಟೆಯಲ್ಲಿ ನುಕು ನುಗ್ಗಲು ಸಂಭವಿಸಿ ಡಿಸಿಪಿ ಶಾಹಿಲ್ ಬಾಗ್ಲಾ ಕೂಡ ಬಿದ್ದು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕಮಿಷನರ್ ಲಾಬುರಾಮ್ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
22/09/2022 04:47 pm