ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯದಲ್ಲಿ ಬರುವ ಶ್ರೀ ಸಿದ್ಧಾರೂಢರ ರೈಲ್ವೆ ನಿಲ್ದಾಣದಲ್ಲಿ ನಿರ್ಮಿಸಲಾದ ಮೂರನೇ ದ್ವಾರ ಲೋಕಾರ್ಪಣೆಗೆ ಕೇಂದ್ರ ರೈಲ್ವೆ ಸಚಿವರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಿದ್ದು, ಮುಂಜಾಗ್ರತಾ ಕ್ರಮವಾಗಿ ಆರ್‌ಪಿಎಫ್ ಶ್ವಾನ ದಳದಿಂದ ತಪಾಸಣೆ ನಡೆಸಲಾಯಿತು.
ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿರುವ ಮೂರನೇ ಮುಖ್ಯ ದ್ವಾರ ಲೋಕಾರ್ಪಣೆ ಹಾಗೂ ದೆಹಲಿ ರೈಲಿಗೆ ಹಸಿರು ನಿಶಾನೆ ತೋರಿಸಲಿರುವ ಕೇಂದ್ರ ಸಚಿವರ ಆಗಮನದ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ನಿಯೋಜನೆ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲಾಯಿತು.
ಈಗಾಗಲೇ ರಾಜ್ಯ ರೈಲ್ವೆ ಪೊಲೀಸ್ ಹಾಗೂ ಆರ್‌ಪಿಎಫ್ ಸಿಬ್ಬಂದಿ ಬಿಗಿ ಬಂದೋಬಸ್ತ್ ನಿಯೋಜಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
11/10/2022 04:05 pm