ಕುಂದಗೋಳ : ಅಕಾಲಿಕ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಶಾಸಕಿ ಕುಸುಮಾವತಿ ಶಿವಳ್ಳಿ ಭೇಟಿ ನೀಡಿ ಪರಿಶೀಲನೆ ಕೈಗೊಂಡು ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.
ಕುಂದಗೋಳ ತಾಲೂಕಿನ ಕಳಸ ಗ್ರಾಮಕ್ಕೆ ಭೇಟಿ ನೀಡಿದ ಶಾಸಕಿ ಗ್ರಾಮದಲ್ಲಿ ಅಕಾಲಿಕ ಮಳೆಗೆ ನೆಲಕ್ಕಪ್ಪಳಿಸಿದ ಮನೆಗಳಿಗೆ ಖುದ್ದು ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಮನೆ ಬಿದ್ದ ಪ್ರಯಾಣಕ್ಕೆ ಅನುಗುಣವಾಗಿ ಪರಿಹಾರ ನೀಡಲು ಸೂಕ್ತ ದಾಖಲೆ ಪಡೆದುಕೊಳ್ಳಿ ಎಂದರು.
ಈ ವೇಳೆ ಗ್ರಾಮಸ್ಥರು ಶಾಸಕರಿಗೆ ನಮ್ಮ ಮನೆ ಬಿದ್ದಿದೆ ನೋಡಿ, ನಮ್ಮ ಮನೆ ಬಿದ್ದಿದೆ ಬನ್ನಿ ಎಂದು ದುಂಬಾಲು ಬಿದ್ದಾಗ ಶಾಸಕಿ ಗ್ರಾಮ ಲೆಕ್ಕಾಧಿಕಾರಿಗಳ ನೇತೃತ್ವದಲ್ಲಿ ಪ್ರತಿಯೊಂದು ಮನೆಯ ಪರಿಸ್ಥಿತಿಯನ್ನು ಸಮಾಧಾನವಾಗಿ ನೋಡಿ ಅಗತ್ಯ ಪರಿಹಾರಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರು.
Kshetra Samachara
22/11/2021 05:37 pm