ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾಗಾ ಆಗಮನಕ್ಕೆ ರಾರಾಜಿಸುತ್ತಿದೆ ಗೋಕುಲ ರೋಡ್; ರಜತ್ ನೇತೃತ್ವದಲ್ಲಿ ಸಕಲ ಸಿದ್ಧತೆ

ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಸ್ವಾಗತಕ್ಕೆ ಸಕಲ ಸಿದ್ಧತೆಯನ್ನು ಮಾಡಲಾಗಿದೆ. ರಜತ್ ಉಳ್ಳಾಗಡ್ಡಿಮಠ ನೇತೃತ್ವದಲ್ಲಿ ಗೋಕುಲ ರಸ್ತೆಯನ್ನು ಮಧುವಣಗಿತ್ತಿಯಂತೆ ಶೃಂಗಾರ ಮಾಡಲಾಗಿದೆ.

ಹುಬ್ಬಳ್ಳಿಯ ಪ್ರತಿಷ್ಠಿತ ಗೋಕುಲ ರಸ್ತೆಯ ಉದ್ದಕ್ಕೂ ಪ್ಲೇಕ್ಸ್, ಬ್ಯಾನರ್ ಹಾಗೂ ಕಟೌಟ್ ಗಳ ಮೂಲಕ ರಾಜ್ಯ ನಾಯಕರು ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರಿಗೆ ಸ್ವಾಗತಕೋರಲು ಬ್ಯಾನರ್ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಈಗಾಗಲೇ ಎಲ್ಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ರಾಹುಲ್ ಗಾಂಧಿ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಂಜೆ ಆರು ಗಂಟೆಗೆ ಆಗಮಿಸುತ್ತಿರುವ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿಗೆ ಸ್ವಾಗತಿಸಲು ಸಿದ್ಧತೆ ನಡೆಸಿದ್ದು, ಖಾದಿ ಉಳಿವಿಗಾಗಿ ಹೋರಾಟಕ್ಕೆ ಮನಸೋತು ಆಗಮಿಸುತ್ತಿರುವ ನಾಯಕನಿಗೆ ಸ್ವಾಗತಿಸಲು ಅವಳಿನಗರ ಸಿದ್ಧವಾಗಿದೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

02/08/2022 03:53 pm

Cinque Terre

44.69 K

Cinque Terre

3

ಸಂಬಂಧಿತ ಸುದ್ದಿ