ಬುಧವಾರ ನವಲಗುಂದ ಪಟ್ಟಣದ ಲಿಂಗರಾಜ್ ವೃತ್ತದ ಬಳಿ ಇರುವ ರೈತ ಭವನ ಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾವಾಗಿ ಅಮೃತ ಸ್ವಾತಂತ್ರ್ಯ ನಡಿಗೆಗೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ನಂತರ ನವಲಗುಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ತ್ರಿವರ್ಣ ಧ್ವಜ ಹಿಡಿದು ಕಾಂಗ್ರೇಸಿಗರು ಬೃಹತ್ ಪಾದಯಾತ್ರೆ ಮೂಲಕ ಮೆರವಣಿಗೆ ನಡೆಸಿದರು. ಇನ್ನು ಕಾಂಗ್ರೆಸ್ ಕಾರ್ಯಕರ್ತರು ಕಹಳೆ ಊದುವ ಮೂಲಕ ಸಿದ್ದರಾಮಯ್ಯ ಅವರನ್ನು ಬರಮಾಡಿಕೊಂಡು, ಅನ್ನಭಾಗ್ಯ ಹರಿಕಾರ ಎಂದು ಜೈಕಾರ ಹಾಕಿದರು. ಸ್ವಾತಂತ್ರ್ಯ ನಡಿಗೆಗೆ ಚಾಲನೆ ನೀಡಿದ ಸಿದ್ದರಾಮಯ್ಯ ಬಾದಾಮಿ ಕಡೆಗೆ ಸಾಗಿದರು.
ಇನ್ನು ಸ್ವಾತಂತ್ರ್ಯ ನಡಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಉಪಾಧ್ಯಕ್ಷರು, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಧಾರವಾಡ ಜಿಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅನೀಲಕುಮಾರ ಪಾಟೀಲ, ನವಲಗುಂದ ಮಾಜಿ ಶಾಸಕರಾದ ಎನ್.ಹೆಚ್. ಕೋನರಡ್ಡಿ, ಮಾಜಿ ಸಚಿವರಾದ ಕೆ.ಎನ್. ಗಡ್ಡಿ, ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ, ಕೆಪಿಸಿಸಿ ಸದಸ್ಯ ವಿಜಯ ಕುಲಕರ್ಣಿ ಸೇರಿದಂತೆ ಅನೇಕ ಮುಖಂಡರು, ಪಕ್ಷದ ಜಿಲ್ಲಾ ಪಂಚಾಯತ, ತಾಲ್ಲೂಕು ಪಂಚಾಯತ, ಪುರಸಭೆ, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು ಸೇರಿದಂತೆ ಪಕ್ಷದ ಎಲ್ಲ ಪದಾಧಿಕಾರಿಗಳು ಭಾಗವಹಿಸುವರು.
Kshetra Samachara
10/08/2022 04:02 pm