ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನಾವು ಯಾವತ್ತೂ ಧರ್ಮ ಒಡೆಯುವ ಕೆಲಸ ಮಾಡಿಲ್ಲ; KPCC ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್

ರಂಭಾಪುರಿ ಶ್ರೀಗಳ ಮುಂದೆ ಮಾಜಿ ಸಿಎಂ ಸಿದ್ದರಾಮಯ್ಯ ಪಶ್ಚಾತ್ತಾಪ ವಿಚಾರಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ ಅವರಲ್ಲಿ ಸ್ಪಷ್ಟತೆ ಕೇಳಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ನಡುವೆ ಹಾಗೂ ಸಿದ್ದರಾಮಯ್ಯ ಅವರ ನಡುವೆ ಯಾವ ಸಂಭಾಷಣೆ ನಡೆದಿದ್ದೆ. ಅವರನ್ನೇ ಕೇಳಬೇಕು. ರಾಜ್ಯದಲ್ಲಿ ಲಿಂಗಾಯತ ಸಮಾಜದ 99 ಉಪಪಂಗಡಗಳಿಗೆ ಸೌಲಭ್ಯ ಸಿಗುತ್ತಿಲ್ಲ. ಲಿಂಗಾಯತ ಉಪಪಂಗಡಗಳಿಗೆ ಶೈಕ್ಷಣಿಕ ಸೌಲಭ್ಯ ಸಿಗಬೇಕು ಅನ್ನೋ ಉದ್ದೆಶಸದಿಂದ ಲಿಂಗಾಯತ ಪ್ರತ್ಯೇಕ ಧರ್ಮದ ಪ್ರಯತ್ನ ಮಾಡಲಾಗಿತ್ತು ಎಂದರು.

ನಾವು ಯಾವುದೇ ಧರ್ಮ ಒಡೆದಿಲ್ಲ. ಶೈಕ್ಷಣಿಕ ವಿಚಾರವಾಗಿ ಪ್ರಯತ್ನ ಮಾಡಿದ್ದೇವು. ಸೈದ್ದಾಂತಿಕ ವಿಚಾರಗಳು ಎಲ್ಲರೂ ಸರಿಯಿಲ್ಲ. ಈಗ ರಾಜ್ಯದಲ್ಲಿ ಉಪ ಪಂಗಡಗಳು ಬೇರೆ ಬೇರೆಯಾಗುತ್ತಿವೆ. ಹೀಗಾಗಿ ನಾವು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ, ಧರ್ಮ ಒಡೆಯುವ ಕೆಲಸ ಮಾಡಿಲ್ಲ. ಚುನಾವಣೆ ನಂತರ ಎಲ್ಲ ಸ್ವಾಮೀಜಿಗಳ ನೇತೃತ್ವದಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

20/08/2022 12:34 pm

Cinque Terre

60.18 K

Cinque Terre

6

ಸಂಬಂಧಿತ ಸುದ್ದಿ