ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಿಟ್ಟಿ ಹಣದಲ್ಲಿ ಜನಸ್ಪಂದನಾ‌ ಕಾರ್ಯಕ್ರಮ; ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿಯವರು ಬಿಟ್ಟಿ ಹಣದಲ್ಲಿ ಮತ್ತು ಲಂಚದ ಹಣದಲ್ಲಿ ಜನಸ್ಪಂದನಾ ಕಾರ್ಯಕ್ರಮ ಮಾಡ್ತಿದಾರೆ. ರಾಜ್ಯದಲ್ಲಿ ಮಳೆ ಬಂದು ಸಾಕಷ್ಟು ಸಮಸ್ಯೆ ಆಗಿದೆ. ಸುಮಾರು 7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.‌ ಬೆಂಗಳೂರಿನಲ್ಲೂ ಸಹ ಮಳೆಯಿಂದಾಗಿ ಸಮಸ್ಯೆಯಾಗಿದೆ. ಆದರೆ ಪರಿಹಾರ ಕೊಡುವುದನ್ನು ಬಿಟ್ಟು ಲಂಚ ಹೊಡೆದಿರೋ ದುಡ್ಡಿನಲ್ಲಿ ಬಿಜೆಪಿಯವರು ಕಾರ್ಯಕ್ರಮ ಮಾಡ್ತಿದಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ಜನರಿಗೆ ಸ್ಪಂದನೆ ಮಾಡೋದು ಬಿಟ್ಟು ಡ್ಯಾನ್ಸ್ ಮಾಡ್ತಿದಾರೆ. ಉಮೇಶ ಕತ್ತಿಯವರು ಉತ್ತರ ಕರ್ನಾಟಕದ ರಾಜಕಾರಣಿ, ಅವರದ್ದೇ ಪಕ್ಷದ ಪ್ರಭಾವಿ ರಾಜಕಾರಣಿ. ಅವರ ನಿಧನದ ಹಿನ್ನೆಲೆ ಒಂದು ಕಡೆ ಶೋಕಾಚರಣೆ ಮಾಡ್ತೀವಿ ಅಂತಾರೆ. ಇನ್ನೊಂದು ಕಡೆ ಡ್ಯಾನ್ಸ್ ಮಾಡ್ತಾರೆ ಎಂದು ವ್ಯಂಗ್ಯವಾಡಿದರು.

ಬಿಜೆಪಿಯವರಿಗೆ ಜನರ ಬಗ್ಗೆ ಕಾಳಜಿ ಇಲ್ಲ ದುಡ್ಡು ಹೊಡೆಯೋದ್ರಲ್ಲಿ ಮಾತ್ರ ಕಾಳಜಿ ಇದೆ. ಪಿಎಸ್ ಐ ಹಗರಣದಲ್ಲಿ ಶಾಸಕ ಬಸವರಾಜ ದಡೇಸಗೂರು ಹಣ ಪಡೆದ ಬಗ್ಗೆ ತಾವೇ ಒಪ್ಪಿಕೊಂಡಿದ್ದಾರೆ. ಆತನ ವಿರುದ್ಧ ಎಫ್ ಐಆರ್ ದಾಖಲು ಮಾಡಿ ತನಿಖೆ ನಡೆಸಬೇಕು ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಪ್ರಿಯಾಂಕ್ ಖರ್ಗೆ ಮಾತನಾಡಿದ್ರೆ ನೋಟೀಸ್ ಕೊಡ್ತಾರೆ. ಆದ್ರೆ ಅವರ ಶಾಸಕ ಸ್ವತಃ ಒಪ್ಪಿಕೊಂಡ್ರೂ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿಯವರು ಪ್ರತಿಯೊಂದು ವಿಷಯದಲ್ಲೂ ಸೇಡಿನ ರಾಜಕೀಯ ಮಾಡ್ತಿದ್ದಾರೆ. ದಾವಣಗೆರೆಯಲ್ಲಿ ನಡೆದ ನನ್ನ ಜನ್ಮದಿನಾಚರಣೆ ಪ್ರತ್ಯುತ್ತರವಾಗಿ ಬಿಜೆಪಿ ಜನಸ್ಪಂದನಾ ಕಾರ್ಯಕ್ರಮ ಮಾಡುತ್ತಿದ್ದಾರೆ.‌ ನನ್ನ ಜನ್ಮದಿನಾಚರಣೆಗೆ ಜನ ತಾವಾಗೇ ಬಂದ್ರು ಆದ್ರೆ ಜನಸ್ಪಂದನಕ್ಕೆ ದುಡ್ಡು ಕೊಟ್ಟು ಕರೆಸುತ್ತಿದ್ದಾರೆ‌ ಎಂದು ಕಿಡಿ ಕಾರಿದರು.

ಇನ್ನು ಎಸಿಬಿ ರದ್ದು ಪಡಿಸಿ ಲೋಕಾಯುಕ್ತ ಮರು ರಚನೆ ಮಾಡಿರುವುದಕ್ಕೆ ನಾವು ಸ್ವಾಗತ ಮಾಡಿದ್ದೇವೆ. ನ್ಯಾಯಾಲಯದಿಂದಲೇ ಆದೇಶವಿದೆ. ಹೀಗಾಗಿ ಸ್ವಾಗತ ಮಾಡಿದ್ದೇವೆ ಎಂದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

10/09/2022 03:31 pm

Cinque Terre

92.67 K

Cinque Terre

20

ಸಂಬಂಧಿತ ಸುದ್ದಿ