ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ನಿರಂತರವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ. ಇದಕ್ಕೆ ಬುಲ್ಡೋಜರ್ ಒಂದೇ ದಾರಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಗೋವನ್ನು ನಾವು ಪೂಜ್ಯನೀಯ ಸ್ಥಾನದಲ್ಲಿಟ್ಟಿದ್ದೇವೆ. ಅದನ್ನು ಕಾಮಧೇನು ಎಂದು ಕರೆಯುತ್ತೇವೆ. ಚಿಕ್ಕಮಗಳೂರಿನಲ್ಲಿ ಅಕ್ರಮ ಕಸಾಯಿ ಖಾನೆಗಳನ್ನು ಕಿತ್ತೆಸೆದಿದ್ದು ಸ್ವಾಗತಾರ್ಹ. ಚಿಕ್ಕಮಗಳೂರಿನ ನಗರಸಭೆಯ ಎಲ್ಲ ಪದಾಧಿಕಾರಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಇದೇ ಮಾದರಿಯಲ್ಲಿ ಇಡೀ ಕರ್ನಾಟಕ ರಾಜ್ಯದ ತುಂಬೆಲ್ಲ ಕಸಾಯಿ ಖಾನೆಗಳ ತೆರವು ಆಗಬೇಕು ಎಂದಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
15/06/2022 12:05 pm