ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕಾಂಗ್ರೆಸ್ ಹಿರಿಯ ಮುಖಂಡರ ಸಮ್ಮುಖದಲ್ಲಿ ಉಮೇದುವಾರಿಕೆ ಸಲ್ಲಿಸಿದ ಗುರಿಕಾರ

ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡಿರುವ ಬಸವರಾಜ ಗುರಿಕಾರ ಅವರು ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿ, ಪಕ್ಷದ ಹಿರಿಯ ಮುಖಂಡರ ನೇತೃತ್ವದಲ್ಲಿ ತಮ್ಮ ಉಮೇದುವಾರಿಗೆ ಸಲ್ಲಿಸಿದರು.

ಧಾರವಾಡದ ಕೆಸಿಡಿ ಸರ್ಕಲ್‌ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಅಲ್ಲಿಂದ ಪಾದಯಾತ್ರೆ ಮಾಡಿ, ಜಿಲ್ಲಾಧಿಕಾರಿ ಕಚೇರಿಗೆ ಬಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಗುರಿಕಾರ ಅವರಿಗೆ ಕಾಂಗ್ರೆಸ್‌ನ ಹಿರಿಯ ಶಾಸಕ ಎಚ್.ಕೆ.ಪಾಟೀಲ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಶಾಸಕರಾದ ಪ್ರಸಾದ ಅಬ್ಬಯ್ಯ, ಕುಸುಮಾವತಿ ಶಿವಳ್ಳಿ, ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಮಾಜಿ ಸಂಸದ ಪ್ರೊ.ಐ.ಜಿ.ಸನದಿ, ಮುಖಂಡರಾದ ಪಿ.ಎಚ್.ನೀರಲಕೇರಿ, ಅನೀಲ ಪಾಟೀಲ, ಎನ್.ಎಚ್.ಕೋನರಡ್ಡಿ ಸೇರಿದಂತೆ ಅನೇಕರು ಸಾಥ್ ನೀಡಿದರು.

ಸತತ ಏಳು ಬಾರಿ ಗೆದ್ದು ವಿಧಾನ ಪರಿಷತ್ ಪ್ರವೇಶಿಸಿದ್ದ ಬಸವರಾಜ ಹೊರಟ್ಟಿ ಅವರು ಇದೀಗ ಎಂಟನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದು, ಇವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವರಾಜ ಗುರಿಕಾರ ಕಣಕ್ಕಿಳಿದಿದ್ದಾರೆ. ಈ ಬಾರಿ ಶಿಕ್ಷಕರು ಬದಲಾವಣೆ ಬಯಸಿದ್ದು, ಚುನಾವಣೆಯಲ್ಲಿ ತಾವು ಗೆಲುವು ಸಾಧಿಸುವುದು ನಿಶ್ಚಿತ ಎಂದು ಗುರಿಕಾರ ವಿಶ್ವಾಸ ವ್ಯಕ್ತಪಡಿಸಿದರು.

ಸದ್ಯ ಹೊರಟ್ಟಿ ಅವರು ಪ್ರತಿನಿಧಿಸುತ್ತಿರುವ ಪಕ್ಷ. ಕೋಮುವಾದಿ ಪಕ್ಷ. ಹೀಗಾಗಿ ಶಿಕ್ಷಕರು ಈ ಬಾರಿ ಆ ಪಕ್ಷವನ್ನು ತಿರಸ್ಕರಿಸುತ್ತಾರೆ. ಈ ಹಿಂದೆ ಸೆಕ್ಯುಲರ್ ಮತಗಳು ಅವರ ಪಾಲಾಗಿದ್ದವು. ಆದರೆ ಬಾರಿ ಹಾಗಿಲ್ಲ. ನಮ್ಮ ಅಭ್ಯರ್ಥಿ ಗುರಿಕಾರ ಅವರು ಜಯಗಳಿಸುವ ವಿಶ್ವಾಸ ನಮಗಿದೆ ಎಂದು ಶಾಸಕ ಎಚ್.ಕೆ.ಪಾಟೀಲ ಹೇಳಿದ್ರು.

ಬುಧವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ತಮ್ಮ ಬಲ ಪ್ರದರ್ಶನದೊಂದಿಗೆ ಗುರಿಕಾರ ಅವರು ಎರಡು ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು. ಇಂದಿನಿಂದ ಪ್ರಚಾರ ಕಣ ಮತ್ತಷ್ಟು ರಂಗೇರಲಿದೆ.

Edited By :
Kshetra Samachara

Kshetra Samachara

25/05/2022 03:29 pm

Cinque Terre

31.55 K

Cinque Terre

6

ಸಂಬಂಧಿತ ಸುದ್ದಿ