ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಿಧಾನ ಪರಿಷತ್‌ನ ನಾಲ್ಕೂ ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ; ಕಟೀಲ್

ಸದ್ಯ ನಾಲ್ಕು ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ ನಡೆದಿರುವ ಚುನಾವಣೆಯಲ್ಲಿ ಬಿಜೆಪಿ ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ ಕಟೀಲ್ ಹೇಳಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಈಗಾಗಲೇ ಬೆಳಗಾವಿಯಲ್ಲಿ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಧಾರವಾಡದಲ್ಲಿ ಸೋಲಿಲ್ಲದ ಸರದಾರ ಬಸವರಾಜ ಹೊರಟ್ಟಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಪ್ರಸಕ್ತ ವರ್ಷ ಬಿಜೆಪಿ ನಾಲ್ಕೂ ಸ್ಥಾನಗಳನ್ನು ಗೆಲ್ಲಲಿದೆ. ಹೀಗಾಗಿ ಮುಂದಿನ ತಂತ್ರಗಳ ಬಗ್ಗೆ ಚರ್ಚೆ ನಡೆಸಲು ಧಾರವಾಡಕ್ಕೆ ಬಂದಿದ್ದೇನೆ ಎಂದರು.

ನರೇಂದ್ರ ಮೋದಿ ಅವರು ಜಗತ್ತು ಮೆಚ್ಚಿದ ನಾಯಕರು. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಭಾರತವನ್ನು ಇಂದು ಇಡೀ ವಿಶ್ವವೇ ತಿರುಗಿ ನೋಡುತ್ತಿದೆ. ಮೋದಿ ಅವರು ಅಭೂತಪೂರ್ವವಾದ ಕೆಲಸ ಮಾಡುತ್ತಿದ್ದಾರೆ ಎಂದರು.

ವಿಧಾನ ಪರಿಷತ್ ಚುನಾವಣೆ ಕಾರ್ಯವೈಖರಿಯೇ ಬೇರೆ, ವಿಧಾನಸಭೆ ಚುನಾವಣೆಯ ಕಾರ್ಯ ವೈಖರಿಯೇ ಬೇರೆ. ಈ ಚುನಾವಣೆ ವಿಧಾನ ಸಭೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಇದ್ದರೂ ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸುವಂತಹ ಕೆಲಸ ನಡೆಯುತ್ತದೆ ಎಂದರು.

Edited By :
Kshetra Samachara

Kshetra Samachara

26/05/2022 05:44 pm

Cinque Terre

21.33 K

Cinque Terre

1

ಸಂಬಂಧಿತ ಸುದ್ದಿ