ಕೇಂದ್ರದ ಬಿಜೆಪಿ ಸರ್ಕಾರ ಇಡಿ ತನಿಖೆಯ ನೆಪದಲ್ಲಿ ಗಾಂಧಿ ಕುಟುಂಬದ ರಾಜಕೀಯ ವರ್ಚಸ್ಸನ್ನು ತಗ್ಗಿಸುವ ಉದ್ದೇಶದಿಂದ ಕಿರುಕುಳ ನೀಡುತ್ತಿದೆ ಎಂದು ನವಲಗುಂದ ಪಟ್ಟಣದಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಾಯಿತು.
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ರ‍್ಯಾಲಿ ನವಲಗುಂದ ಪಟ್ಟಣದ ಲಿಂಗರಾಜ ವೃತ್ತದಿಂದ ಆರಂಭವಾಗಿ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ನಂತರ ತಹಶೀಲ್ದಾರ ಕಾರ್ಯಾಲಯದವರೆಗೆ ಬೃಹತ್ ಪಾದಯಾತ್ರೆ ಮೂಲಕ ತೆರಳಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎನ್ ಗಡ್ಡಿ, ಮಾಜಿ ಶಾಸಕ ಎನ್.ಹೆಚ್ ಕೋನರಡ್ಡಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ, ಕೆ.ಪಿ.ಸಿ.ಸಿ ಸದಸ್ಯ ವಿಜಯ ಕುಲಕರ್ಣಿ, ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ನವಲಗುಂದ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡ್ರ ಕಾರ್ಯಕರ್ತರು ಭಾಗಿಯಾಗಿದ್ದರು.
Kshetra Samachara
20/06/2022 05:08 pm