ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಜೂನ್ 26ಕ್ಕೆ SSK ಸಮಾಜದ ರಾಜ್ಯ ಸಮಾವೇಶ

ರಾಜ್ಯದ ಎಸ್.ಎಸ್.ಕೆ ಸಮಾಜದಿಂದ ಜೂನ್ 26ರಂದು ಇಲ್ಲಿನ ಗೋಕುಲ ರಸ್ತೆಯ ಕ್ಯೂಬಿಕ್ಸ್ ಹೋಟೆಲ್‌ನಲ್ಲಿ ರಾಜ್ಯಮಟ್ಟದ ಯುವ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಎಸ್.ಎಸ್.ಕೆ ಸಮಾಜದ ಅಧ್ಯಕ್ಷ ಅಶೋಕ ಕಾಟವೆ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯುವ ಸಮಾವೇಶವನ್ನು ಸಮಾಜದ ಯವಕರಿಗಾಗಿ ಹಮ್ಮಿಕೊಳ್ಳಲಾಗಿದೆ. ಅಂದು ಯುವ ಸಭಾವನ್ನು ಪ್ರಾರಂಭ ಮಾಡಲಾಗುವುದು. ರಾಜ್ಯದ ವಿವಿಧ ತಾಲೂಕಿನಿಂದ ಸುಮಾರು 500ಕ್ಕೂ ಹೆಚ್ಚು ಯುವ ಪದಾಧಿಕಾರಿಗಳು ಭಾಗವಹಿಸುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ಶೈಕ್ಷಣಿಕ, ಆರ್ಥಿಕ, ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲಾಗುವುದು, ಅಲ್ಲದೇ ಯುವಕರು ಈ ಎಲ್ಲ ಕ್ಷೇತ್ರದಲ್ಲಿ ಪಾಲ್ಗೊಳ್ಳುವಿಕೆಗೆ ಪ್ರೋತ್ಸಹಿಸಲಾಗುವುದು ಎಂದರು.

ಇನ್ನು ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ್, ಶ್ರೀನಿವಾಸ್ ಮಾನೆ, ಪ್ರಸಾದ್ ಅಬ್ಬಯ್ಯ ಸೇರಿದಂತೆ ಮುಂತಾದ ಗಣ್ಯಮಾನ್ಯರು ಭಾಗವಹಿಸಲಿದ್ದಾರೆ ಎಂದರು.'

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

23/06/2022 12:21 pm

Cinque Terre

76.49 K

Cinque Terre

1

ಸಂಬಂಧಿತ ಸುದ್ದಿ