ಸರ್ಕಾರಿ ಕಚೇರಿಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡುವುದು ಕಾನೂನುಬದ್ದ, ಅವುಗಳು ಯಾವವು ನಿಯಮ ಬಾಹಿರವಾಗಿ ಇರಲಿಲ್ಲ ಎಂಬುದನ್ನು ಇತ್ತೀಚೆಗೆ ಸರ್ಕಾರವೇ ಒಪ್ಪಿಕೊಂಡು ಆದೇಶ ಹೊರಡಿಸಿದೆ. ಇದು ವಾಂತಿ ಮಾಡಿ ನುಂಗಿದಂತಾಗಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣರೆಡ್ಡಿ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಕರ್ನಾಟಕ ಜನ ಚೈತನ್ಯ ಯಾತ್ರೆ ಕೈಗೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರ ಈ ಹಿಂದೆ ಸರ್ಕಾರಿ ಕಚೇರಿಯಲ್ಲಿ ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿರ್ಬಂಧಿಸಿದೆ. ಇದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಹೋರಾಟವನ್ನು ಹತ್ತಿಕ್ಕಲು ಮಾಡಿದ ಹುನ್ನಾರ ಅಷ್ಟೇ ಅಲ್ಲದೇ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಮಾಡಿದ ಮುಂದಿನ ಹೆಜ್ಜೆ ಆಗಿತ್ತು. ಇದಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ತಪ್ಪಿದ ಅರಿವಾಗಿ ಆದೇಶವನ್ನು ವಾಪಾಸ್ ಪಡೆದುಕೊಂಡಿದೆ ಎಂದರು.
ಇನ್ನು ರಾಜ್ಯದಲ್ಲಿ ಮೂರು ಪ್ರಮುಖ ಭ್ರಷ್ಟ ಪಕ್ಷಗಳಿವೆ. ಸಮೃದ್ಧ ಕರ್ನಾಟಕದಲ್ಲಿ ಅಸಮಾನತೆ, ನಿರುದ್ಯೋಗ, ಬಡತನ ಹೆಚ್ಚಾಗಿವೆ. ಇದನ್ನು ತೊಡದು ಹಾಕಲು ಕರ್ನಾಟಕ ರಾಷ್ಟ್ರ ಸಮಿತಿ ಮುಂದಾಗುತ್ತಿದೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/07/2022 01:34 pm