ಹುಬ್ಬಳ್ಳಿ-ಧಾರವಾಡ ಸಿಎಂ ತವರು ಜಿಲ್ಲೆ. ಜಗದೀಶ್ ಶೆಟ್ಟರ್, ಪ್ರಹ್ಲಾದ ಜೋಶಿಯವರದೂ ಜಿಲ್ಲೆ ಇದು. ಭ್ರಷ್ಟಾಚಾರ ಇಲ್ಲಿ ತಾಂಡವವಾಡುತ್ತಿದೆ. ಅದಕ್ಕೆ ಇಲ್ಲಿ ಕೂಡಿರುವ ಜನರೇ ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರತಿಭಟನೆ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಮಾನಸಿಕ ಕಿರುಕುಳ ನೀಡುವ ಉದ್ದೇಶದಿಂದ ಇ.ಡಿ. ವಿಚಾರಣೆ ಮಾಡಲಾಗುತ್ತಿದೆ. ಗಾಂಧಿ ಕುಟುಂಬ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದೆ. ಇಂತಹ ಕುಟುಂಬಕ್ಕೆ ಪ್ರಧಾನಿ ಮೋದಿ ಅಪಕೀರ್ತಿ ತರಲು ಯತ್ನಿಸುತ್ತಿದ್ದಾರೆ ಎಂದರು.
ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟಾಚಾರ ಮೇರೆ ಮೀರಿದೆ. ಅವರದೇ ಪಕ್ಷದಲ್ಲಿ 40% ಕಮಿಷನ್ ಆರೋಪವಿದೆ, ಇದನ್ನು ಮೊದಲು ತನಿಖೆ ಮಾಡಲಿ. ಅದನ್ನು ಬಿಟ್ಟು ಸೇಡಿನ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಡಾ. ಸುಧಾಕರ್, ಭ್ರಷ್ಟಾಚಾರ ಕುರಿತು ವೇದಿಕೆ ಸಿದ್ಧ ಮಾಡಿ ಎಂಬುವಂತ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ಸುಧಾಕರ ಅಥವಾ ಮತ್ತೊಬ್ಬ ನನಗೆ ಏನೂ ಅಲ್ಲ. ನನ್ನ ಜೊತೆ ಚರ್ಚೆಗೆ ಸರಿಸಮಾನರು ಬೇಕು. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಹಿರಂಗ ಚರ್ಚೆ ಬಂದರೆ ನಾನು ಎನೀ ಟೈಮ್, ಎನೀ ವೇರ್ ಸಿದ್ಧ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
22/07/2022 03:33 pm