ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜನಪರ ಸರ್ಕಾರ ಅಂತ ಮಾತಿನಲ್ಲಿ ಹೇಳಿದ್ರೇ ಹೇಗೆ ಜನಪರ ಕಾಯಿದೆ ಜಾರಿ ಮಾಡ್ರಿ

ಹುಬ್ಬಳ್ಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿದ ಸುಗ್ರೀವಾಜ್ಞೆ ಹಾಗೂ ವಿವಿಧ ಕಾರ್ಮಿಕ,ರೈತ ವಿರೋಧಿ ಕಾಯಿದೆ ವಿರೋಧಿಸಿ ಹುಬ್ಬಳ್ಳಿ ತಾಲೂಕ ರೈತಪರ ಹಾಗೂ ವಿವಿಧ ಸಂಘಟನೆ ಸಹಯೋಗದಲ್ಲಿಂದು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಇದೇ ವೇಳೆ ಮಾತನಾಡಿದ ಮಾಜಿ ಶಾಸಕ ಎನ್.ಎಚ್.ಕೊನರೆಡ್ಡಿ,ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊರೋನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸುಗ್ರೀವಾಜ್ಞೆ ಹಾಗೂ ರೈತ, ಕಾರ್ಮಿಕ ವಿರೋಧಿ ಕಾಯಿದೆ ಜಾರಿಗೊಳಿಸಿರುವುದು ಖಂಡನೀಯವಾಗಿದೆ ಎಂದರು.

ರಾಜ್ಯ ಹಾಗೂ ದೇಶಾದ್ಯಂತ ಬಂದ್ ಗೆ ಕರೆಕೊಟ್ಟಿದ್ದು,ಒಟ್ಟು 28 ಸಂಘಟನೆಯ ಸಹಯೋಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

ಯಾವುದೇ ಸಾರ್ವಜನಿಕ ಅವಶ್ಯಕ ಸೇವೆಗಳಿಗೆ ದಕ್ಕೆ ಮಾಡದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

Edited By : Nirmala Aralikatti
Kshetra Samachara

Kshetra Samachara

25/09/2020 12:28 pm

Cinque Terre

51.87 K

Cinque Terre

2

ಸಂಬಂಧಿತ ಸುದ್ದಿ