ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಎರಡು ಶಿಕ್ಷಕರ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ : ಮಾಜಿ ಸಿಎಂ ಕುಮಾರಸ್ವಾಮಿ

ಈಗಾಗಲೇ ರಾಜ್ಯದಲ್ಲಿ ಎರಡು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಎದುರಾಗಿದೆ. ಇದರಲ್ಲಿ ಎರಡು ಕ್ಷೇತ್ರಕ್ಕೂ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ನನ್ನ ಅಧಿಕಾರ ಅವಧಿಯಲ್ಲಿ ಶಿಕ್ಷಕರ ಕ್ಷೇತ್ರಕ್ಕೆ ಹಲವಾರು ಕೊಡುಗೆ ನೀಡಿದ್ದೇನೆ ಆದ ಕಾರಣ ಎರಡು ಶಿಕ್ಷಕರ ಕ್ಷೇತ್ರ ಗೆಲ್ಲುವ ನಿರೀಕ್ಷೆ ಇದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಬಿಜೆಪಿ ಅಭ್ಯರ್ಥಿ ತನ್ನ ಸಾಧನೆ ಎಂದು ಪ್ರಚಾರ ಮಾಡುತ್ತಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ನಾನು ಮಾಡಿದ ಕಾರ್ಯ ಸ್ಪಲ್ಪವಾದರೂ ನೆನಪಿದ್ದರೇ ಮತ್ತೊಂದು ಬಾರಿ ನಮ್ಮ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯ ಮತ ನೀಡಬೇಕೆಂದು ಮನವಿ ಮಾಡಿದರು.

ಅಷ್ಟೇ ಅಲ್ಲದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಪ್ರಥಮ ದರ್ಜೆ ಕಾಲೇಜು ಗಳನ್ನು ಆರಂಭ ಮಾಡಿದ್ದೇನೆ. ನಾನು ಒಂದೇ ವರ್ಷದಲ್ಲಿ ಶಿಕ್ಷಕರ ಸಾಕಷ್ಟು ಸಮಸ್ಯೆಗಳನ್ನು ಬಗೆ ಹರಿಸಿದ್ದೇನೆ. ಎಲ್ಲ ಶಿಕ್ಷಕರು ನಾನು ಮಾಡಿದ ಅಲ್ಪ ಸ್ವಲ್ಪ ಕೆಲಸ ನೆನಿಪಿದ್ದರೆ ನಮ್ಮನ್ನು ಆರಿಸಿ ತರುತ್ತಾರೆ ಎಂದರು.

Edited By :
Kshetra Samachara

Kshetra Samachara

04/06/2022 01:00 pm

Cinque Terre

20.34 K

Cinque Terre

1

ಸಂಬಂಧಿತ ಸುದ್ದಿ