ನವಲಗುಂದ : ನವಲಗುಂದ ತಾಲೂಕಿನ ಯಮನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಆರೇಕುರಹಟ್ಟಿ ಗ್ರಾಮಕ್ಕೆ ಪ್ರತ್ಯೇಕ ಗ್ರಾಮ ಪಂಚಾಯಿತಿ ಬೇಕು ಎಂದು ಸೋಮವಾರ ನಡೆದ ಉಪಚುನಾವಣೆಯನ್ನು ಗ್ರಾಮಸ್ಥರು ಬಹಿಷ್ಕರಿಸಿದರು.
ಹೌದು ತೆರವಾದ ಸ್ಥಾನಕ್ಕೆ ಸೋಮವಾರ ಕಾಲವಾಡ, ತಡಹಾಳ ಗ್ರಾಮಗಳಲ್ಲಿ ಉಪಚುನಾವಣೆ ನಡೆದಿದ್ದು, ಯಮನೂರು ಗ್ರಾಮ ಪಂಚಾಯತಿ ಬದಲಾಗಿ ಅರೇಕುರಹಟ್ಟಿ ಗ್ರಾಮ ಪಂಚಾಯಿತಿ ಮಾಡಬೇಕು ಎಂದು ಪಟ್ಟು ಹಿಡಿದ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಿದರು.
Kshetra Samachara
28/12/2021 04:39 pm