ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರದ ಹಾವಳಿ; ರಸ್ತೆಗಿಳಿದು ಪ್ರತಿಭಟನೆ ಮಾಡಿದ ಆಪ್ ಸದಸ್ಯರು

ಹು-ಧಾ ಮಹಾನಗರ ಪಾಲಿಕೆಯಲ್ಲಿ, ಸರ್ವಾಂಗೀಣ ಅಭಿವೃದ್ಧಿ ಮಾಡಬೇಕಾದ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ತಹಶೀಲ್ದಾರ್ ಕಚೇರಿ ಎದುರಿಗೆ ಆಮ್ ಆದ್ಮಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಮೊನ್ನೆ ನಡೆದ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಆಡಳಿತರೂಢ ಬಿಜೆಪಿ ಪಾಲಿಕೆ ಸದಸ್ಯರೇ ಪಾಲಿಕೆಯಲ್ಲಿನ ಭ್ರಷ್ಟಾಚಾರ ಬಯಲಿಗೆ ಎಳೆದಿದ್ದಾರೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಪಾಲಿಕೆ ಮೇಯರ್ ಸೂಕ್ತ ಕ್ರಮ ಜರುಗಿಸುವ ಮೂಲಕ ಪಾಲಿಕೆಯಿಂದ ಅಧಿಕಾರಿಗಳನ್ನು ಎತ್ತಂಗಡಿ ಮಾಡಬೇಕು. ಪಾಲಿಕೆ ಹಾಗೂ ಹು-ಧಾ ಮಹಾನಗರ ಸೇವೆಯನ್ನು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳ ಅವಶ್ಯಕತೆ ನಮಗಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿಗಾವಹಿಸಬೇಕು ಎಂದು ಒತ್ತಾಯಿಸಿದರು.

ಪಾಲಿಕೆಯ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ ಎಂದು ಹೇಳುವ ಮೂಲಕ, ಕಾರ್ಯನಿರ್ವಹಿಸುವ ಅಧಿಕಾರಿಗಳೇ ಸಾರ್ವಜನಿಕರ ಮೇಲೆ ದಬ್ಬಾಳಿಕೆ ಮಾಡಿ, ಪ್ರತಿಯೊಂದು ಕೆಲಸಕ್ಕೆ ಹಣ ವಸೂಲಿ ಮಾಡುತ್ತಿದ್ದು, ಅನ್ಯಾಯವಾಗಿದೆ ಎಂದು ದೂರಿದರು. ಈ ಭ್ರಷ್ಟಾಚಾರ ನಿಗ್ರಹ ಮಾಡಲು ಪಾಲಿಕೆ ‌ಮೇಯರ್ ಹಾಗೂ ರಾಜ್ಯ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದೇ ಹೋದರೇ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ಎಚ್ಚರಿಕೆ ನೀಡಿದರು.

Edited By :
Kshetra Samachara

Kshetra Samachara

01/08/2022 04:59 pm

Cinque Terre

44.84 K

Cinque Terre

8

ಸಂಬಂಧಿತ ಸುದ್ದಿ