ಹುಬ್ಬಳ್ಳಿ ಧಾರವಾಡ ಅವಳಿನಗರವನ್ನು ಕೇಂದ್ರ ಬಿಂದುವನ್ನಾಗಿಸಿಕೊಂಡು ಆರಂಭಗೊಂಡ ಪಬ್ಲಿಕ್ ನೆಕ್ಸ್ಟ್ ಮಾಧ್ಯಮ ಈಗ ರಾಜ್ಯಾದ್ಯಂತ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಯು.ಟಿ.ಖಾದರ ಪಬ್ಲಿಕ್ ನೆಕ್ಸ್ಟ್ ಮಾಧ್ಯಮಕ್ಕೆ ಶುಭ ಹಾರೈಸಿದ್ದಾರೆ.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಸಚಿವರು, ನಿಷ್ಪಕ್ಷಪಾತ ವರದಿಗಾರಿಕೆಯಿಂದ ದೇಶ ವಿದೇಶದ ಸುದ್ಧಿಗಳನ್ನು ತಕ್ಷಣವೇ ಜನರಿಗೆ ತಲುಪಿಸುವ ಕಾರ್ಯವನ್ನು ಮಾಡುತ್ತಿರುವ ಪಬ್ಲಿಕ್ ನೆಕ್ಸ್ಟ್ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.
ಆಧುನಿಕ, ವಿನೂತನ ತಂತ್ರಜ್ಞಾನದ ಮೂಲಕ ಆರಂಭಗೊಂಡಿರುವ ನಿಮ್ಮ ಪಬ್ಲಿಕ್ ನೆಕ್ಸ್ಟ್ ಈಗಾಗಲೇ ಸಾರ್ವಜನಿಕರಿಗೆ ಪ್ರೀತಿಗೆ ಪಾತ್ರರಾಗಿ ನಿಷ್ಪಕ್ಷಪಾತ ಸುದ್ಧಿಯನ್ನು ಜನರಿಗೆ ಮುಟ್ಟಿಸುವ ಕಾರ್ಯವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ಮಾಜಿ ಸಚಿವ ಯು.ಟಿ.ಖಾದರ ಅಭಿನಂದನೆ ಸಲ್ಲಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
03/08/2022 03:18 pm