ಧಾರವಾಡ: ಬಾಂಗ್ಲಾ ದೇಶದಲ್ಲಿ ಹಿಂದೂ ಅಲ್ಪ ಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ, ಅಂತರರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘದ ಕಾರ್ಯಕರ್ತರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು.
ಧಾರವಾಡದ ಕಲಾ ಭವನದಿಂದ, ಸ್ವಾಮಿ ವಿವೇಕಾನಂದ ಸರ್ಕಲ್ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಯೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.
ಇಸ್ಕಾನ್ ದೇವಾಲಯಗಳು ಅದರ ಸದಸ್ಯರು, ಪಕ್ಕದ ಹಿಂದೂ ದೇವಾಲಯಗಳು ಸೇರಿದಂತೆ ಬಾಂಗ್ಲಾ ದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ಇತ್ತೀಚೆಗೆ ನಡೆದ ಹಿಂಸಾತ್ಮಕ ಘಟನೆಗಳ ಸರಣಿಯಿಂದ ಇಸ್ಕಾನ್ ಸಮುದಾಯ ಆಘಾತಕ್ಕೆ ಒಳಗಾಗಿದೆ. ಕೂಡಲೇ ಭಾರತ ಸರ್ಕಾರ ಬಾಂಗ್ಲಾ ದೇಶದಲ್ಲಿರುವ ಹಿಂದೂ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
Kshetra Samachara
26/10/2021 01:01 pm