ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ದೇವಸ್ಥಾನದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್: ಕ್ಷಮೆಯಾಚಿಸಿದ ಪಾಲಿಕೆ ಸದಸ್ಯ ಬಡಿಗೇರ

ಹುಬ್ಬಳ್ಳಿ: ದೇವಸ್ಥಾನದ ವಿರುದ್ಧ ಅವಹೇಳನಕಾರಿ ಹೇಳಿಕೆಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಆರೋಪದ ಹಿನ್ನಲೆಯಲ್ಲಿ ಅಚಾತುರ್ಯದಿಂದ ಘಟನೆ ಸಂಭವಿಸಿರುವುದಾಗಿ ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ ಕ್ಷಮೆಯಾಚನೆ ಮಾಡಿದ್ದಾರೆ.

ಹು-ಧಾ ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು, ಅಚಾತುರ್ಯದಿಂದ ನಡೆದ ಘಟನೆಯಾಗಿದೆ ಎಂದು ಕ್ಷಮೆಯಾಚಿಸಿದ್ದಾರೆ.

ಮೊನ್ನೆ ರಾಮಣ್ಣ ಬಡಿಗೇರ ವಿರುದ್ಧ ಬೆಳಗಾವಿ ಜಿಲ್ಲೆಯ ಸಿರಸಂಗಿ ಕಾಳಿಕಾದೇವಿ ದೇವಸ್ಥಾನದ ಟ್ರಸ್ಟ್ ಸದಸ್ಯರಿಂದ ಆರೋಪ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ರಾಮಣ್ಣ ಬಡಿಗೇರ ಹೆಸರಿನಲ್ಲಿದ್ದ ಅಕೌಂಟ್ ನಿಂದ ದೇವಸ್ಥಾನಕ್ಕೆ ಯಾವುದೇ ದೇಣಿಗೆ, ದವಸ ಧಾನ್ಯ ನೀಡಬಾರದು ಎಂಬುವಂತ ಹೇಳಿಕೆಯೊಂದು ಪೋಸ್ಟ್ ಆಗಿದ್ದ ಹಿನ್ನಲೆಯಲ್ಲಿ ಕ್ಷಮೆಯಾಚನೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಈ ಪೋಸ್ಟಿಗೂ ನನಗೂ ಸಂಬಂಧವಿಲ್ಲ. ಆ ಘಟನೆ ಅಚಾತುರ್ಯದಿಂದ ಆಗಿದೆ. ದೇವಸ್ಥಾನದ ಟ್ರಸ್ಟ್ ಸದಸ್ಯರಿಗೆ ನಾನು ಕ್ಷಮೆ ಕೇಳುತ್ತೇನೆ. ಯಾರೋ ಮಾಡಿದ ಫೊಸ್ಟ್ ನಿಂದ ನನ್ನ ಮೇಲೆ ಈ ರೀತಿ ಆರೋಪ ಬಂದಿದೆ.

ಈ ಬಗ್ಗೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

Edited By : Shivu K
Kshetra Samachara

Kshetra Samachara

15/12/2021 01:38 pm

Cinque Terre

28.31 K

Cinque Terre

6

ಸಂಬಂಧಿತ ಸುದ್ದಿ