ಹುಬ್ಬಳ್ಳಿ: ಶಾಲಾ-ಕಾಲೇಜುಗಳಲ್ಲಿ ನಮ್ಮ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿ ಹಾಗೂ ಕಡ್ಡಾಯವಾಗಿ ಸಮವಸ್ತ್ರ ಸಂಹಿತೆ ಪಾಲಿಸುವಂತೆ ಸರ್ಕಾರ ಹೊರಡಿಸಿರುವ ಆದೇಶ ಖಂಡಿಸಿ ನಗರದ ಮುಸ್ಲಿಂ ಸಮುದಾಯ ಇಲ್ಲಿನ ತಹಶಿಲ್ದಾರರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಮುಖಂಡ ಅಶ್ಪಾಕ್ ಕುಮಾಟಾಕರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಜಾಬ್ ಧರಿಸುವುದು ನಮ್ಮ ಮೂಲಭೂತ ಹಕ್ಕು. ಆದರೆ, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ತರಗತಿಗೆ ಹೋಗಲು ರಾಜಕೀಯ ಕಾರಣಕ್ಕೆ ಅವಕಾಶ ನಿರಾಕರಿಸಲಾಗುತ್ತಿದೆ. ಸರ್ಕಾರದ ಈ ನಡೆ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
07/02/2022 03:27 pm