ಹುಬ್ಬಳ್ಳಿ: ಹಿಜಾಬ್ ವಿವಾದ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಬಗ್ಗೆ ನಾವು ಮಾತನಾಡಕ್ಕೆ ಆಗಲ್ಲ. ನ್ಯಾಯಾಲಯದಲ್ಲಿ ಏನು ತೀರ್ಪು ಬರತ್ತೋ ಅದನ್ನು ಸರ್ಕಾರ ಪಾಲಿಸಬೇಕು. ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಲ್ಲಿ ಧರ್ಮವನ್ನು ಬಿಂಬಿಸುವ ಬಟ್ಟೆಗಳನ್ನು ಧರಿಸದಂತೆ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10 ನೇ ತರಗತಿವರೆಗೆ ಈಗಾಗಲೇ ಸಮವಸ್ತ್ರ ಇದೆ. ಆದರೆ ಕಾಲೇಜಿನ ಸಮಾಜಶಾಸ್ತ್ರದ ಕುರಿತು ಏನು ತೀರ್ಮಾನ ಕೈಗೊಳ್ಳುತ್ತಾರೋ ಕಾದು ನೋಡಬೇಕು. ನ್ಯಾಯಾಲಯ ನೀಡಿದ ತೀರ್ಪನ್ನು ಸರ್ಕಾರ ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತೆ, ಹಿಜಾಬ್ ವಿವಾದ ಕೆಲವರ ಹಿಡನ್ ಅಜೆಂಡಾ ಆಗಿರಬಹುದು ಎಂದರು.
Kshetra Samachara
11/02/2022 12:00 pm