ಹುಬ್ಬಳ್ಳಿ: ಧಾರವಾಡ ಜಿಲ್ಲೆಯಿಂದ ಭವ್ಯ ಕಾಶಿ ದಿವ್ಯ ಕಾಶಿ ದರ್ಶನಕ್ಕೆ ಹೊರಟ ಯಾತ್ರಾರ್ಥಿಗಳಿಗೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶುಭ ಕೋರಿ ಯಾತ್ರೆಗೆ ಚಾಲನೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿಯವರ ನಿರ್ದೇಶನದಲ್ಲಿ ಪುನರ್ ನಿರ್ಮಾಣ ಮಾಡಿರುವ ಕಾಶಿಯ ದರ್ಶನಕ್ಕೆ ಧಾರವಾಡ ಜಿಲ್ಲೆಯಿಂದ ಸುಮಾರು 150 ಯಾತ್ರಾರ್ಥಿಗಳು ಪ್ರಯಾಣ ಬೆಳೆಸಿದ್ದು, ಭಾರತೀಯ ಜನತಾ ಪಕ್ಷದ ಮುಖಂಡರ ಹಾಗೂ ಪಾಲಿಕೆ ಸದಸ್ಯರ ಸಹಯೋಗದೊಂದಿಗೆ ಶುಭ ಕೋರಿ ಬಿಳ್ಕೋಡುಗೆ ನೀಡಲಾಯಿತು.
ಇನ್ನೂ ಇದೇ ವೇಳೆ ಸುಮಾರು ಸಂಖ್ಯೆಯಲ್ಲಿ ಜಮಾವಣೆಗೊಂಡ ಕಾರ್ಯಕರ್ತರು, ಬಿಜೆಪಿ ಮುಖಂಡರು ಪ್ರಧಾನಿ ನರೇಂದ್ರ ಮೋದಿಗೆ ಜೈಕಾರ ಹಾಕಿ ಅಭಿನಂದನೆ ಸಲ್ಲಿಸಿದರು.
Kshetra Samachara
15/02/2022 02:00 pm