ಧಾರವಾಡ: ರಾಜ್ಯದಲ್ಲಿ ಮೇಲಿಂದ ಮೇಲೆ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತಲೇ ಇದೆ. ಹೀಗೆ ಹತ್ಯೆ ಮಾಡಿದ ಆರೋಪಿಗಳನ್ನು ಸರ್ಕಾರ ಗುಂಡಿಟ್ಟು ಕೊಲ್ಲಬೇಕು ಇಲ್ಲವೇ ಅವರನ್ನು ಗಲ್ಲು ಶಿಕ್ಷೆಗೆ ಗುರಿ ಮಾಡಬೇಕು. ಇಲ್ಲದೇ ಹೋದರೆ ನಾವೂ ಹತಿಯಾರ್ ಹಿಡಿಯಬೇಕಾಗುತ್ತದೆ ಎಂದು ರಾಮ್ ಸೇನೆಯ ಜಿಲ್ಲಾಧ್ಯಕ್ಷ ವಿಜಯ ಕದಂ ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷಾ ಅವರ ಹತ್ಯೆಯನ್ನು ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ರಾಮ್ ಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ವಿಜಯ ಕದಂ, ಕೆಲ ರಾಜಕಾರಣಿಗಳು ಹಿಂದೂ, ಮುಸ್ಲಿಂರ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದ್ದಾರೆ. ನಾವೂ ಸುಮ್ಮನಿದ್ದೇವೆ. ಸೌಹಾರ್ಧಯುತ ಭಾವನೆ ಎಲ್ಲರಲ್ಲೂ ಇರಲಿ ಎಂದು ನಾವು ಶಾಂತಿಯಿಂದ ಇದ್ದೇವೆ. ಅವರು ಒಂದು ಹೊಡೆದರೆ ವಾಪಸ್ ಅವರಿಗೆ ಎರಡು ಒಡೆಯುವ ತಾಕತ್ತು ನಮ್ಮಲ್ಲೂ ಇದೆ. ಸರ್ಕಾರ ಇದಕ್ಕೆ ಅವಕಾಶ ಮಾಡಿಕೊಡಬಾರದು. ಕೂಡಲೇ ಹರ್ಷಾ ಅವರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿ ಮಾಡಬೇಕು ಎಂದು ಆಗ್ರಹಿಸಿದರು.
ಮಂಜುನಾಥ ಚೌಹಾಣ, ಶಂಭು ಗಾಯಕವಾಡ, ಅರ್ಜುನ ಲಕ್ಕಪ್ಪನವರ, ಬಸವರಾಜ ಹರಿಜನ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Kshetra Samachara
23/02/2022 02:31 pm