ಹುಬ್ಬಳ್ಳಿ: ಈಗಾಗಲೇ ಹಿಜಾಬ್ ಗೊಂದಲ ನ್ಯಾಯಾಲಯದಲ್ಲಿ ತೀರ್ಪು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಂವಿಧಾನಬದ್ಧ ಮೂಲಭೂತ ಹಕ್ಕು ಆಗಿರುವ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿರುವ ಸರ್ಕಾರದ ಆದೇಶವನ್ನು ಖಂಡಿಸಿ ನಗರದಲ್ಲಿ ಮುಸ್ಲಿಂ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ಮಾಡಿದರು.
ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನೆ ರ‍್ಯಾಲಿಯನ್ನು ಆರಂಭಿಸಿ ಪ್ರತಿಭಟನಾಕಾರರು,
ರಾಜ್ಯ ಸರ್ಕಾರ ಸಂವಿಧಾನದ ಆದೇಶವನ್ನು ಕೂಡಲೇ ಹಿಂಪಡೆಯಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದು ತಹಶೀಲ್ದಾರ ಮೂಲಕ ರಾಷ್ಟ್ರಪತಿ ಅವರಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ನೀಡುವುದರ ಮೂಲಕ ಎಚ್ಚರಿಕೆ ನೀಡಿದರು.
Kshetra Samachara
26/02/2022 06:43 pm