ಧಾರವಾಡ: ಶಿವಮೊಗ್ಗದಲ್ಲಿ ನಡೆದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷಾ ಅವರ ಹತ್ಯೆ ಖಂಡಿಸಿ ಧಾರವಾಡದ ಕಡಪಾ ಮೈದಾನದಲ್ಲಿ ಹಿಂದೂ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಿತು.
ಸಮಾವೇಶಕ್ಕೂ ಮುನ್ನ ಧಾರವಾಡದ ಪ್ರಮುಖ ರಸ್ತೆಗಳಲ್ಲಿ ಬೈಕ್ ಮೆರವಣಿಗೆ ನಡೆಯಿತು.
ಆನಂತರ ಕಡಪಾ ಮೈದಾನದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಒಗ್ಗಟ್ಟಿನ ಮಂತ್ರ ಜಪಿಸಿದರು. ಸ್ವತಃ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಅಮೃತ ದೇಸಾಯಿ, ಪರಮಾನಂದ ಕಾಳಿ ಸ್ವಾಮೀಜಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಸಮಾವೇಶದಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಪಾಲ್ಗೊಂಡಿದ್ದರು. ಮಹಿಳಾ ಕಾರ್ಯಕರ್ತರು ಕೂಡ ಪಾಲ್ಗೊಂಡು ಹಿಂದೂ ಪರ ಘೋಷಣೆಗಳನ್ನು ಕೂಗಿದರು.
ಹರ್ಷಾ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಮೌನಾಚರಣೆ ಕೂಡ ಮಾಡಲಾಯಿತು.
Kshetra Samachara
27/02/2022 10:37 pm