ಅಣ್ಣಿಗೇರಿ: ಜಂಗಮ ಶ್ರೇಯೋಭಿವೃದ್ಧಿ ಸಂಘ ಅಣ್ಣಿಗೇರಿ ತಾಲೂಕು ಘಟಕದ ವತಿಯಿಂದ ಮುಂಜಾನೆ ಪಟ್ಟಣದಲ್ಲಿ ಶ್ರೀ ರೇಣುಕಾಚಾರ್ಯರ ಭಾವಚಿತ್ರವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಸಾಯಂಕಾಲ ಶ್ರೀ ಪುರದೇಶ್ವರ ದೇವಸ್ಥಾನದ ಅವರಣದಲ್ಲಿ ಶ್ರೀ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು.
ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ತಾಲೂಕು ಜಂಗಮ ಶ್ರೇಯೋಭಿವೃದ್ಧಿ ಸಂಘಕ್ಕೆ ತಂದೆ ತಾಯಿ ಹೆಸರಿನಲ್ಲಿ ಎರಡು ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ. ಹಾಗೂ ಸಮುದಾಯ ಭವನಕ್ಕೆ ಸರ್ಕಾರದಿಂದ 10 ಲಕ್ಷ ರೂಪಾಯಿ ಅನುದಾನ ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಜಂಗಮ ಶ್ರೇಯೋಭಿವೃದ್ಧಿ ಸಂಘದ ಉಪಾಧ್ಯಕ್ಷ ಸೋಮಶೇಖರ್ ಹಿರೇಮಠ್ ವೇದಿಕೆಯಲ್ಲಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯರು ಅಡ್ನೂರು ವಹಿಸಿದ್ದರು. ದಿವ್ಯ ಸಾನಿಧ್ಯವನ್ನು ಶ್ರೀ ಸಿದ್ಧವೀರ ಶಿವಯೋಗಿ ಶಿವಾಚಾರ್ಯರು ನರಗುಂದ ಹಾಗೂ ಶ್ರೀ ಬೂದೀಶ್ವರ ಮಹಾಸ್ವಾಮಿಗಳು ಹೊಸಳ್ಳಿ ವಹಿಸಿದ್ದರು.
ಅತಿಥಿಗಳಾಗಿ ಬಿ.ಬಿ ಗಂಗಾಧರಮಠ, ಶಿವಾನಂದ ಕರಿಗಾರ, ಷಣ್ಮುಖ ಗುರುಕಾರ. ಶಿವಯೋಗಿ ಸುರಕೋಡ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
28/03/2022 06:05 pm