ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನುಗ್ಗಿಕೇರಿ ದೇವಸ್ಥಾನಕ್ಕೆ ಮುಸ್ಲಿಂ ನಾಯಕರ ಭೇಟಿ

ಧಾರವಾಡ: ಧಾರವಾಡದ ಪ್ರತಿಷ್ಠಿತ ನುಗ್ಗಿಕೇರಿ ದೇವಸ್ಥಾನದಲ್ಲಿ ಕಳೆದ ಶನಿವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಇಂದು ಮುಸ್ಲಿಂ ನಾಯಕರಾದ ಅಂಜುಮನ್ ಸಂಸ್ಥೆ ಮಾಜಿ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ, ಮಾಜಿ ಸಚಿವ ಎ.ಎಂ.ಹಿಂಡಸಗೇರಿ ಸೇರಿದಂತೆ ಇತರರು ಭೇಟಿ ನೀಡಿ ದೇವಸ್ಥಾನದ ಪರ್ಯಾಯಸ್ಥರೊಂದಿಗೆ ಮಾತುಕತೆ ನಡೆಸಿದರು.

ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಪರ್ಯಾಯಸ್ಥ ನರಸಿಂಹರಾವ್ ದೇಸಾಯಿ ಅವರೊಂದಿಗೆ ಮಾತುಕತೆ ನಡೆಸಿದ ಮುಸ್ಲಿಂ ನಾಯಕರು, ಎಲ್ಲರೂ ಸೇರಿ ಸೌಹಾರ್ದಯುತದಿಂದ ಇರೋಣ. ಸಮಾಜದಲ್ಲಿ ದಾಂಧಲೆ ಉಂಟು ಮಾಡುವಂತಹ ಸನ್ನಿವೇಶಗಳಿಗೆ ಅವಕಾಶ ಕಲ್ಪಿಸುವುದು ಬೇಡ ಎಂದು ಮನವಿ ಮಾಡಿದರು. ಇದಕ್ಕೆ ಪರ್ಯಾಯಸ್ಥ ನರಸಿಂಹರಾವ್ ಅವರು ಸಕಾರಾತ್ಮಕ ಸ್ಪಂದನೆ ನೀಡಿದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

11/04/2022 03:03 pm

Cinque Terre

60.16 K

Cinque Terre

9

ಸಂಬಂಧಿತ ಸುದ್ದಿ