ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನ್ಯಾಯಯುತ ಹೋರಾಟ ಬಿಟ್ಟು ಹಿಂಸಾಚಾರಕ್ಕೆ ಇಳಿದಿದ್ದು ಸರಿಯಲ್ಲ; ಮುತಾಲಿಕ್

ಹುಬ್ಬಳ್ಳಿ: ಇಸ್ಲಾಂ ಧರ್ಮ ಅಂದರೆ ಶಾಂತಿ ಸೌಹಾರ್ದತೆ ಹಾಗೂ ಹೊಂದಾಣಿಕೆಯಿಂದ ಹೋಗುವಂತದ್ದು. ಆದರೆ ನ್ಯಾಯಯುತವಾಗಿ ಹೋರಾಟ ಮಾಡುವ ಬದಲಿಗೆ ಈ ರೀತಿ ಹಿಂಸಾಚಾರ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ ಎಂದು ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ನಿನ್ನೆ ನಡೆದ ಹಿಂಸಾಚಾರವನ್ನು ಖಂಡಿಸಿದ್ದಾರೆ.

ಈ ಕುರಿತು ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಅವರು, ಮೆಕ್ಕಾ ಮದೀನಾದ ಮಸೀದಿಯ ಮೇಲೆ ಭಗವಾನ್ ಧ್ವಜವನ್ನು ಹಾರಿಸಿರುವ ಒಂದು ವಿಡಿಯೋ ಪೋಸ್ಟ್ ಮಾಡಿದ್ದಕ್ಕೆ ಇಷ್ಟೊಂದು ಕ್ರೌರ್ಯವನ್ನು ಮೆರೆಯುವುದು ಸರಿಯಲ್ಲ. ಇಸ್ಲಾಂ ಧರ್ಮಕ್ಕೆ ತನ್ನದೇ ಆದ ಮಹತ್ವವಿದೆ. ಶಾಂತಿ, ಸೌಹಾರ್ದತೆ, ಹೊಂದಾಣಿಕೆಗೆ ಮತ್ತೊಂದು ಹೆಸರು ಇಸ್ಲಾಂ ಧರ್ಮ ಇಂತಹ ಧರ್ಮದ ನಿಯಮಗಳನ್ನು ಗಾಳಿಗೆ ತೂರಿ ಏಕಾಏಕಿ ಕಲ್ಲು ತೂರಾಟದಂತಹ ಹಿಂಸಾಚಾರ ಮಾಡಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ. ಇದನ್ನು ಶ್ರೀರಾಮಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.

ನೀವು ನ್ಯಾಯಯುತವಾಗಿ ಹೋರಾಟ ಮಾಡಿ ನ್ಯಾಯವನ್ನು ಪಡೆದುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಈ ರೀತಿಯಲ್ಲಿ ಗಲಾಟೆ ಮಾಡಿರುವುದು ಎಷ್ಟರಮಟ್ಟಿಗೆ ಸರಿ ಎಂದು ಗಲಾಟೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

17/04/2022 11:50 am

Cinque Terre

192.46 K

Cinque Terre

74

ಸಂಬಂಧಿತ ಸುದ್ದಿ