ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಸೌಹಾರ್ದ ಇಫ್ತಿಯಾರ್ ಕೂಟದಲ್ಲಿ ಕಾಂಗ್ರೆಸ್ ಮುಖಂಡರು ಭಾಗಿ

ನವಲಗುಂದ : ನವಲಗುಂದ ನಗರದ ಶಾದಿ ಮಹಲ್ ಹಾಲ್ ನಲ್ಲಿ ಪವಿತ್ರ ರಂಜಾನ್ ಮಾಸದ ಪ್ರಯುಕ್ತ ಸೌಹಾರ್ದ ಇಫ್ತಿಯಾರ್ ಕೂಟವನ್ನು ಆಯೋಜಿಸಲಾಗಿದ್ದು, ಹಲವು ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ವೇಳೆ ಸಮಾಜದ ಮುಖಂಡರಿಂದ ಮಾಜಿ ಶಾಸಕ ಎನ್ ಎಚ್ ಕೋನರಡ್ಡಿ, ಧಾರವಾಡ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೇಸ್ ಅಧ್ಯಕ್ಷ ವಿನೋದ ಅಸೂಟಿ ಹಾಗೂ ಮಾಜಿ ಪುರಸಭೆ ಅಧ್ಯಕ್ಷ ಮಂಜುನಾಥ ಜಾಧವ ಅವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನವಲಗುಂದ ಮಾಜಿ ಶಾಸಕ ಎನ್ ಎಚ್ ಕೋನರಡ್ಡಿ, ಧಾರವಾಡ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೇಸ್ ಅಧ್ಯಕ್ಷ ವಿನೋದ ಅಸೂಟಿ, ಅಂಜುಮನ್ ಇಸ್ಲಾಂ ಅಧ್ಯಕ್ಷ ಅಬ್ಬಾಸ್ ದೇವರಿಡು, ಉಸ್ಮಾನ್ ಬಬರ್ಚಿ, ಸೈಯದ್ ಅಹಮದ್, ಮಕನದರ್, ರಾಘು ಮೇಟಿ, ಮಾಜಿ ಪುರಸಭೆ ಅಧ್ಯಕ್ಷ ಮಂಜುನಾಥ ಜಾಧವ, ಪುರಸಭೆ ಸದಸ್ಯರು ಪ್ರಕಾಶ ಸಿಗ್ಲಿ, ಮೋದಿನಸಾಬ್ ಶಿರೂರ್, ಶಿವಾನಂದ ತಡಸಿ, ಜೀವನ ಪವಾರ, ಅಪ್ಪಣ್ಣ ಹಳ್ಳದ, ಸುರೇಶ ಮೇಟಿ, ಮಹಾಂತೇಶ ಭೋವಿ, ಗಬ್ಬರ್ ಮಖಂದರ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

27/04/2022 09:10 pm

Cinque Terre

25.43 K

Cinque Terre

2

ಸಂಬಂಧಿತ ಸುದ್ದಿ