ಹುಬ್ಬಳ್ಳಿ: ವೀರಶೈವ ಎಂಬುವುದು ಲಿಂಗಾಯತ ಧರ್ಮದ ಒಂದು ಪಂಗಡವಾಗಿದೆ. ಹಾಗಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾವನ್ನು ಅಖಿಲ ಭಾರತ ಲಿಂಗಾಯತ ಮಹಾಸಭಾವನ್ನಾಗಿ ಮಾಡಬೇಕು ಎಂದು ಮಹಾಸಭಾದ ಅಧ್ಯಕ್ಷ ಎಮ್.ವಿ.ಗೋಗರಶೆಟ್ಟಿ ಒತ್ತಾಯಿಸಿದ್ದಾರೆ.
ನಗರದಲ್ಲಿ ಇಂದು ಮಾತನಾಡಿದ ಅವರು, ಅಖಿಲ ಭಾರತ ಲಿಂಗಾಯತ ಮಹಾಸಭಾ ಹಿಂದಿನಿಂದಲೂ ಬಂದಂತಹ ಧರ್ಮವಾಗಿದೆ. ಆದರೆ ಇತ್ತೀಚೆಗೆ ಕೆಲವು ಮುಖಂಡರು ಅಖಿಲ ಭಾರತ ಲಿಂಗಾಯತ ಮಹಾಸಭಾವನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾವನ್ನಾಗಿ ಮಾಡಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರವು ಜನರಿಗೆ ಕಳೆದ ಹತ್ತು ವರ್ಷಗಳಿಂದ ವೀರಶೈವ ಲಿಂಗಾಯತ ಜಾತಿ ಪ್ರಮಾಣ ಪತ್ರಗಳನ್ನು ನೀಡುತ್ತಿವೆ. ಈ ದಿಸೆಯಲ್ಲಿ ಲಿಂಗಾಯತ ಧರ್ಮದ ಪಂಗಡವಾದ ವೀರಶೈವವನ್ನು ಪ್ರತ್ಯೇಕ ಧರ್ಮ ಮಾಡುವುದು ಸರಿಯಲ್ಲ. ಈಗಾಗಲೇ ಇದನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದೇವೆ. ಕೋರ್ಟ್‌ನಲ್ಲಿ ನಮ್ಮ ಪರವಾಗಿ ತೀರ್ಪು ಬರುವ ನಿರೀಕ್ಷೆ ಇದೆ ಎಂದರು.
Kshetra Samachara
18/05/2022 05:57 pm