ಧಾರವಾಡ: ದೇಶದಲ್ಲಿ ಎಸ್ ಡಿಪಿಐ ಹಾಗೂ ಪಿಎಫ್ ಐ ಸಂಘಟನೆಗಳು ಅಶಾಂತಿ ಸೃಷ್ಠಿಸುವುದರ ಜೊತೆಗೆ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿವೆ. ಈ ಸಂಘಟನೆಗಳನ್ನು ಕೂಡಲೇ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಎರಡೂ ಸಂಘಟನೆಯವರು ಭಾರತವನ್ನು 2047ಕ್ಕೆ ಇಸ್ಲಾಮೀಕರಣಗೋಳಿಸುವ ಉದ್ದೇಶ ಹೊಂದಿದ್ದಾರೆ. ಕೇರಳ ರಾಜ್ಯದ ಮುಖ್ಯಮಂತ್ರಿ ಪೀಣರಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಅಚ್ಯುತನ್ ಇಬ್ಬರೂ ಪಿಎಫ್ಐ ಹಾಗೂ ಎಸ್ ಡಿಪಿಐ ಸಂಘಟನೆಗಳನ್ನು ಬ್ಯಾನ್ ಮಾಡುವಂತೆ ಕೇಂದ್ರಕ್ಕೆ ಒತ್ತಾಯ ಮಾಡಿದ್ದಾರೆ. ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ ಈ ಸಂಘಟನೆಗಳನ್ನು ಬ್ಯಾನ್ ಮಾಡುವಂತೆ ಒತ್ತಾಯ ಮಾಡಿತ್ತು. ಈಗ ಇದೇ ಪಕ್ಷ ಅಧಿಕಾರದಲ್ಲಿದ್ದು, ಈ ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.
ದೇಶ ಹಾಗೂ ಕರ್ನಾಟಕವೂ ಸೇರಿ ಹಲವು ರಾಜ್ಯಗಳಲ್ಲಿ ನಡೆದ ಹಿಂದೂ ಕಾರ್ಯಕರ್ತರ ಕೋಲೆಯಲ್ಲಿ ಬಹುತೇಕ PFI - SDPI ಸಂಘಟನೆಗಳ ಕೈವಾಡವೇ ಇದೆ ಆದ್ದರಿಂದ ಈ ಸಂಘಟನೆಗಳನ್ನು ಬ್ಯಾನ್ ಮಾಡದೇ ಹೋದಲ್ಲಿ ಆ ಸಂಘಟನೆಗಳ ಕಾರ್ಯಕರ್ತರನ್ನು ನಾವೇ ನುಗ್ಗಿ ಹೊಡೆಯಬೇಕಾಗುತ್ತದೆ ಎಂದು ಗಂಗಾಧರ ಕುಲಕರ್ಣಿ ಎಚ್ಚರಿಸಿದರು.
Kshetra Samachara
05/08/2022 01:45 pm