ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಜಮೀರ್ ಅಹ್ಮದ್ ಮೇಲೆ ಸರ್ಕಾರ ಏಕೆ ಕ್ರಮ ಕೈಗೊಂಡಿಲ್ಲ; ಮುತಾಲಿಕ್ ಪ್ರಶ್ನೆ

ಧಾರವಾಡ: ಚಾಮರಾಜಪೇಟೆಯ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸಂಬಂಧಿಸಿದ್ದು ಎಂದು ಈಗಾಗಲೇ ಸ್ಪಷ್ಟವಾಗಿದೆ. ಹೀಗಿರುವಾಗ ಈ ಜಾಗದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡುವುದಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಅವರು ಹೇಳಿಕೆ ನೀಡುವ ಮೂಲಕ ಕೋಮು ಗಲಭೆ ಸೃಷ್ಠಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಸರ್ಕಾರ ಅವರ ಮೇಲೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಪ್ರಶ್ನಿಸಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ವಿಶ್ವಭಾರತಿ ಸಂಸ್ಥೆಯ ಮುಖ್ಯಸ್ರ ಭಾಸ್ಕರ್ ಮೇಲೆ ಕೋಮು ಭಾವನೆ ಕೆರಳಿಸುತ್ತಿದ್ದೀರಿ ಎಂದು ಅವರ ಮೇಲೆ ಕೇಸ್ ಹಾಕಿರುವ ಸರ್ಕಾರ ಈ ಜಮೀರ್ ಅಹ್ಮದ್ ಮೇಲೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ಈ ಸರ್ಕಾರ ತಾರತಮ್ಯ ಮಾಡುತ್ತಿದೆ. ಹಿಂದೂಗಳ ಮೇಲೆಯೇ ಹೆಚ್ಚು ಕೇಸ್ ಹಾಕಲಾಗಿದೆ. ಅದಕ್ಕಾಗಿಯೇ ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಜನ ಸಿಟ್ಟಾಗಿದ್ದಾರೆ. ಶಾಸಕ ಜಮೀರ್ ಅಹ್ಮದ್ ಹಾಗೂ ಅಬ್ದುಲ್ ರಜಾಕ್ ಇಬ್ಬರ ಮೇಲೂ ಕೇಸ್ ದಾಖಲಿಸಬೇಕು ಎಂದು ಮುತಾಲಿಕ್ ಒತ್ತಾಯಿಸಿದ್ದಾರೆ.

ಹಿಂದೂಗಳಿಂದ ಗೆದ್ದ ಬಿಜೆಪಿ ಸರ್ಕಾರ ಹಿಂದೂಗಳ ಮೇಲೆಯೇ ಕೇಸ್ ಹಾಕುವ ಕೆಲಸ ಮಾಡುತ್ತಿದೆ. ಜಮೀರ್‌ನನ್ನು ಬಚಾವ್ ಮಾಡಿ ಭಾಸ್ಕರ್ ಮೇಲೆ ಕೇಸ್ ಹಾಕ್ತೀರಾ? ಅಬ್ದುಲ್ ರಜಾಕ್ ಉದ್ಧಟತನ ಮಾಡುವ ಹಾಗೂ ದೇಶದ್ರೋಹಿಯನ್ನು ನೀವು ರಕ್ಷಣೆ ಮಾಡುತ್ತೀರಾ? ಚಾಮರಾಜಪೇಟೆಯ ಈದ್ಗಾ ಮೈದಾನ ಸರ್ಕಾರದ್ದು ಅಂದಮೇಲೆ ಸರ್ಕಾರ ಇದರ ಬಗ್ಗೆ ನಿರ್ಣಯ ಕೈಗೊಳ್ಳಬೇಕು. ಆ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಾಡಬೇಕು. ಅಲ್ಲಿ ಭಾರತ ಮಾತಾಕಿ ಜೈ ಎಂಬ ಘೋಷಣೆ ಮೊಳಗಬೇಕು ಸರ್ಕಾರ ಈ ನಿರ್ಣಯ ಕೈಗೊಳ್ಳದೇ ಹೋದರೆ ಮೋದಿಗೆ ನೀವು ಅಪಮಾನ ಮಾಡಿದಂತಾಗುತ್ತದೆ ಎಂದಿದ್ದಾರೆ.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

11/08/2022 12:39 pm

Cinque Terre

61.47 K

Cinque Terre

1

ಸಂಬಂಧಿತ ಸುದ್ದಿ